Breaking News

ಎತ್ತಿನಹೊಳೆ ಯೋಜನೆ ಸೆ.6 ರಂದು ಲೋಕಾರ್ಪಣೆ

ಬೆಂಗಳೂರು: ರಾಜ್ಯದಲ್ಲಿ ಹಲವು ಕಾರಣಗಳಿಗೆ ವಿವಾದಕ್ಕೆ ಗುರಿಯಾಗಿದ್ದ ಹಾಗೂ ಏಳು ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸುವ ಬಹು ನಿರೀಕ್ಷಿತ ಎತ್ತಿನ ಹೊಳೆ ಯೋಜನೆಯ ಏತ ಕಾಮಗಾರಿಗಳು ಕೊನೆಗೂ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೌರಿ ಹಬ್ಬದ ದಿನವಾದ ಸೆ.6ರಂದು ಏಳು ವಿಯರ್‌ಗಳ ಮೂಲಕ ನೀರು ಮೇಲೆತ್ತುವ ಯೋಜನೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಯೋಜನೆಯ ಮೊದಲ ಹಂತವಾದ 8 ವಿಯರ್‌ಗಳ ಮೂಲಕ 28 ಟಿಎಂಸಿ ನೀರನ್ನು ಮೇಲೆತ್ತುವ ಲಿಫ್ಟ್‌ ಕಾಂಪೊನೆಂಟ್‌ ಪೂರ್ಣಗೊಳಿಸಲು ನಿರ್ಧರಿಸಲಾಗಿತ್ತು. 3ನೇ ಸಂಖ್ಯೆಯ ವಿಯರ್‌ ಹೊರತುಪಡಿಸಿ ಉಳಿದೆಲ್ಲವೂ ಸಿದ್ಧವಾಗಿದ್ದು, ಸೆ.6ರಂದು ಶುಕ್ರವಾರ 7 ವಿಯರ್‌ಗಳಿಂದ ನೀರು ಮೇಲೆತ್ತುವ ಮೂಲಕ ಎತ್ತಿನ ಹೊಳೆ ಮೊದಲ ಹಂತಕ್ಕೆ ಚಾಲನೆ ದೊರೆಯಲಿದೆ. ಶುಕ್ರವಾರ 3,000 ಕ್ಯೂಸೆಕ್‌ ಲಿಫ್ಟ್‌ ಸಾಮರ್ಥ್ಯದಲ್ಲಿ 1,500 ಕ್ಯೂಸೆಕ್‌ ನೀರನ್ನು ಲಿಫ್ಟ್‌ ಮಾಡಲಾಗುವುದು. ಬಳಿಕ 48 ಕಿ.ಮೀ. ತೆರೆದ ಕಾಲುವೆ ಮೂಲಕ ಸಾಗಿ ವೇದ ವ್ಯಾಲಿ ಮೂಲಕ ವಾಣಿ ವಿಲಾಸ ಅಣೆಕಟ್ಟಿಗೆ ನೀರು ಹರಿಸಲಾಗುವುದು ಎಂದು ತಿಳಿದುಬಂದಿದೆ.

Share News

About BigTv News

Check Also

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಬಾಂಬ್ ಬೆದರಿಕೆ: ಪರಿಶೀಲನೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸೋಮವಾರ ಪೊಲೀಸರು ಪರಿಶೀಲನೆ ನಡೆಸಿದರು. …

Leave a Reply

Your email address will not be published. Required fields are marked *