ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧವೂ ಷಡ್ಯಂತರ ನಡೆಯುತ್ತಿದೆ. ರಾಜ್ಯಪಾಲರಿಗೆ ನನ್ನ ವಿರುದ್ಧವೂ ದೂರು ನೀಡಲು ಸಿದ್ಧತೆ ನಡೆಯುತ್ತಿದೆ ಎನ್ನುವುದು ನನಗೆ ಗೊತ್ತಿದೆ. ಆದರೆ, ನಾನು ಹೆದರುವ ಪ್ರಶ್ನೆಯೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಈಗಾಗಲೇ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮತಿ ನೀಡಿರುವುದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.
ಇದೀಗ ಕರ್ನಾಟಕ ಕಾಂಗ್ರೆಸ್‌ನ ಪ್ರಮುಖ ನಾಯಕ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ವಿರುದ್ಧವೂ ರಾಜ್ಯಪಾಲರಿಗೆ ದೂರು ನೀಡಲು ತೆರೆಮರೆಯ ಸಿದ್ಧತೆ ನಡೆದಿದೆ. ಹೀಗೋಂದು ಷಡ್ಯಂತ್ರ ನಡೆಯುತ್ತಿರುವುದು ನನ್ನ ಗಮನಕ್ಕೂ ಬಂದಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಅಲ್ಲದೇ ಈ ರೀತಿಯ ಬೆದರಿಕೆಗಳಿಗೆ ನಾನು ಎಂದೂ ಹೆದರಿದ್ದಿಲ್ಲ. ಮುಂದೆ ಹೆದರುವ ಪ್ರಶ್ನೆಯೂ ಇಲ್ಲ ಎಂದು ಅವರು ತಮ್ಮ ಹಳೇಯ ಸ್ಟೈಲ್‌ನಲ್ಲಿ ಮತ್ತೊಮ್ಮೆ ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

