ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳ ಕಳ್ಳಸಾಗಣೆ ಮಾಡುತ್ತಿರುವುದು ಮತ್ತು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಸಿಸಿಬಿ ಪೊಲೀಸರು ನಡೆಸಿದ ದಾಳಿಯಿಂದ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಬೆಂಗಳೂರಿನ ಹೊಂಗಸಂದ್ರದ ಮನೆಯೊಂದರ ಮೇಲೆ ಸಿಸಿಬಿ ಮಹಿಳಾ ಸಂರಕ್ಷಣಾ ದಳ ದಾಳಿ ನಡೆಸಿದ್ದು, ಈ ವೇಳೆ ಮನೆಯಲ್ಲಿ ಇಬ್ಬರು ಹುಡುಗಿಯರು ಪತ್ತೆಯಾಗಿದ್ದಾರೆ.
ದಾಳಿ ವೇಳೆ ಪತ್ತೆಯಾದ ಇಬ್ಬರೂ ಸಹ ಅಪ್ರಾಪ್ತೆಯರು ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ. ಅಲ್ಲದೆ, ಅವರು ಬಾಂಗ್ಲಾ ಮೂಲದವರು ಎನ್ನಲಾಗಿದೆ. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರಲ್ಲಿ ಇಬ್ಬರು ಒರಿಸ್ಸಾ ಮೂಲದವರು, ಒಬ್ಬ ಸ್ಥಳೀಯ ನಿವಾಸಿ. ಸೂರಜ್ ಸಾಹಜಿ, ಕರಿಷ್ಮಾ ಶೇಕ್, ಸುಬ್ರಮಣ್ಯ ಶಾಸ್ತ್ರಿ ಬಂಧಿತ ಆರೋಪಿಗಳಾಗಿದ್ದಾರೆ. ಈ ಪೈಕಿ ಸುಬ್ರಮಣ್ಯ ಶಾಸ್ತ್ರಿ ಸ್ಥಳೀಯನಾಗಿದ್ದು, ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದಾನೆ.
ಅಪ್ರಾಪ್ತೆಯರ ಕಳ್ಳಸಾಗಣೆ ಮತ್ತು ವೇಶ್ಯಾವಾಟಿಕೆ ಸಂಬಂಧ ಬೊಮ್ಮನಹಳ್ಳಿ ಠಾಣೆಯಲ್ಲಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆದರೆ ಈಗ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

