Breaking News

ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ: ಡಿಕೆಶಿ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ಕುರಿತ ಚರ್ಚೆ ಮುನ್ನೆಲೆಗೆ ಬಂದಿದ್ದು, ಇದಕ್ಕೆ ತೆರೆ ಎಳೆಯುವ ಪ್ರಯತ್ನವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಮಾಡಿದ್ದಾರೆ.
ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ ಆಗ್ತೀನಿ ಎಂಬ ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ.ದೇಶಪಾಡೆ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ನೇರವಾಗಿ ಹೇಳಿದ್ದಾರೆ.
ದೇಶಪಾಂಡೆ ಹಿರಿಯ ನಾಯಕರು, ಅನುಭವಿ ರಾಜಕಾರಣಿಗಳು, ಸಿಎಂ ಆಗಬೇಕು ಎಂದು ಆಸೆಪಡುವುದರಲ್ಲಿ ತಪ್ಪೇನಿಲ್ಲ. ಅವರು ಯಾವ ನಿರೀಕ್ಷೆಯಲ್ಲಿದ್ದಾರೆ ಗೊತ್ತಿಲ್ಲ. ಆಸೆ ಪಡುವುದು ತಪ್ಪಲ್ಲ, ಆದರೆ ಆಸೆ ಬಗ್ಗೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದಲ್ಲ. ಪಕ್ಷ, ಹೈಕಮಾಂಡ್ ಅವರಿಗೆ ಕೊಡಬೇಕಿರುವ ಗೌರವ ಕೊಡುತ್ತದೆ. ಆದರೆ ಸದ್ಯಕ್ಕೆ ಸಿಎಂ ಹುದ್ದೆ ಖಾಲಿಯಿಲ್ಲ ಎಂದು ಹೇಳಿದರು.

Share News

About BigTv News

Check Also

ಮಣಿಪಾಲ: ರಸ್ತೆಯಲ್ಲೇ ಗುಂಪು ಕಟ್ಟಿ ಮಾರಾಮಾರಿ; ವೈರಲ್ ವಿಡಿಯೊ ಆಧರಿಸಿ 11 ಯುವಕರ ವಿರುದ್ಧ ಪ್ರಕರಣ ದಾಖಲು

ಮಣಿಪಾಲದ ಈಶ್ವರನಗರದಲ್ಲಿ ರಾಷ್ಟ್ರೀಯ ಹೆದ್ದಾರಿ 169(A) ಪಕ್ಕದ ಸಾರ್ವಜನಿಕ ರಸ್ತೆಯಲ್ಲಿ ಯುವಕರ ಗುಂಪೊಂದು ಪರಸ್ಪರ ಹೊಡೆದಾಡಿಕೊಂಡ ಘಟನೆ ನಡೆದಿದೆ. ಈ …

Leave a Reply

Your email address will not be published. Required fields are marked *