ಅಮರಾವತಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಸತತ 2ನೇ ದಿನವೂ ವರುಣನ ಆರ್ಭಟ ಮುಂದುವರೆದು ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ರಸ್ತೆ ಮತ್ತು ರೈಲು ಸಂಚಾರಕ್ಕೆ ಅಡಚನೆಯುಂಟಾಗಿದೆ. ಹಲವೆಡೆ ಮಳೆ ಸಂಬಂಧ ಅವಘಡಗಳು ಸಂಭವಿಸಿ ಮೃತಪಟ್ಟವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.
ಉಭಯ ರಾಜ್ಯಗಳ ನದಿಗಳು ಮೈದುಂಬಿ ಹರಿಯುತ್ತಿವೆ. ಮುನ್ನೆಚ್ಚರಿಕೆ ಕ್ರಮವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳು ಪ್ರವಾಹ ಪೀಡಿತ ಪ್ರದೇಶಗಳಿಂದ ಸಾವಿರಾರು ನಿವಾಸಿಗಳನ್ನು ರಕ್ಷಿಸಿ ಪರಿಹಾರ ಕೇಂದ್ರಗಳಿಗೆ ರವಾನಿಸಿವೆ.
ತೆಲಂಗಾಣದಲ್ಲಿ ಹೈದರಾಬಾದ್ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಸುರಿದಿದ್ದು,ರೈಲು ಸಂಪರ್ಕ ರದ್ದುಗೊಂಡಿವೆ. ದಕ್ಷಿಣ ಮಧ್ಯ ರೈಲ್ವೆ ಜಾಲದ ಅನೇಕ ಸ್ಥಳಗಳಲ್ಲಿ ಭಾರೀ ಮಳೆ ಮತ್ತು ಹಳಿಗಳ ಮೇಲೆ ನೀರು ನಿಂತಿದ್ದರಿಂದ 54 ರೈಲುಗಳ ಮಾರ್ಗ ಬದಲಿಸಲಾಗಿದೆ ಎಂದು ಎಸ್‌ಸಿಆರ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎರಡೂ ರಾಜ್ಯಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು, ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ತಡೆ ಪಡೆಗಳು ಪ್ರವಾಹ ಪ್ರದೇಶಗಳಿಂದ ಸಾವಿರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ, ಶಿಬಿರಗಳಿಗೆ ಸ್ಥಳಾಂತರಿಸಿದ್ದಾರೆ.ಈ ನಡುವೆ ಪ್ರಧಾನಮಂತ್ರಿ ನರೇಂದ್ರಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ತೆಲಂಗಾಣ ಸಿಎಂ ಎ.ರೇವಂತ್ ರೆಡ್ಡಿ ಅವರೊಂದಿಗೆ ಮಾತುಕತೆ ನಡೆಸಿದ್ದು, ಮಳೆ ಮತ್ತು ಪ್ರವಾಹವನ್ನು ಎದುರಿಸಲು ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.
ಈ ನಡುವೆ ಪ್ರವಾಹ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 26 ತಂಡಗಳನ್ನು ನಿಯೋಜಿಲಾಗಿದೆ. ಈ ಪೈಕಿ ಈಗಾಗಲೇ ಎರಡು ರಾಜ್ಯಗಳಲ್ಲಿ 12 ತಂಡಗಳನ್ನು ಕಾರ್ಯಾಚರಣೆ ಕೈಗೊಂಡಿದ್ದು, ಇನ್ನೂ 14 ತಂಡಗಳನ್ನು ಕಳುಹಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.14 ತಂಡಗಳ ಪೈಕಿ 8 ತಂಡಗಳನ್ನು ದೇಶದ ವಿವಿಧ ಸ್ಥಳಗಳಿಂದ ವಿಮಾನದಲ್ಲಿ ಕರೆತರಲಾಗುತ್ತಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ಈವರೆಗೆ ಕನಿಷ್ಠ 25 ಮಂದಿ ಸಾವಿಗೀಡಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

