Breaking News

ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಸಾಮಗ್ರಿ ಬೆಂಕಿಗೆ ಆಹುತಿ

ತುಮಕೂರು : ಪಟಾಕಿ ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸಾಮಗ್ರಿಗಳು ಸುಟ್ಟು ಕರಕಲಾಗಿರುವ ಘಟನೆ ತುಮಕೂರು ನಗರದ ಮಂಡಿಪೇಟೆಯಲ್ಲಿ ಸಂಭವಿಸಿದೆ. ಆದರೆ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಇಂದು ಬೆಳಿಗ್ಗೆ ಈ ಅಗ್ನಿ ದುರಂತ ಸಂಭವಿಸಿದ್ದು, ಅಗ್ನಿಯ ಜ್ವಾಲೆ ಪಕ್ಕದ ಪ್ಲಾಸ್ಟಿಕ್ ಅಂಗಡಿ, ಗ್ರಂಥಿಗೆ ಅಂಗಡಿಯ ಗೋದಾಮಿಗೂ ವ್ಯಾಪಿಸಿತು. ಅಕ್ರಮವಾಗಿ ಪಟಾಕಿ ಶೇಖರಿಸಿಟ್ಟಿದ್ದರಿಂದ ಅನಾಹುತ ಸಂಭವಿಸಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ. ನಿರಂತರವಾಗಿ ಪಟಾಕಿಗಳು ಸ್ಫೋಟಗೊಂಡಿದ್ದು ಜನರಲ್ಲಿ ಕೆಲಕಾಲ ಆತಂಕ ಉಂಟುಮಾಡಿತ್ತು. ಗೋದಾಮಿಗೆ ಹೊಂದಿಕೊಂಡಂತೆ ಮನೆಗಳಿಗೂ ಕೂಡ ಹಾನಿಯಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಮಂಡಿಪೇಟೆ ರಸ್ತೆಯಲ್ಲಿ ಎರಡು ಕಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *