Breaking News

ತೃಣಮೂಲ ಕಾಂಗ್ರೆಸ್ ಸರ್ಕಾರದಿಂದ ಸುದ್ದಿವಾಹಿನಿಗಳ ಬಹಿಷ್ಕಾರಕ್ಕೆ ನಿರ್ಧಾರ

ಕೋಲ್ಕತ್ತಾ: ಆರ್.ಜಿ ಕಾರ್ ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಬಂಗಾಳ ವಿರೋಧಿ ಅಜೆಂಡವನ್ನು ಇಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಸುದ್ದಿ ಪ್ರಸಾರ ಮಾಡಿದ ಆರೋಪದಡಿ ಮೂರು ಸುದ್ದಿ ವಾಹಿನಿಗಳನ್ನು ಬಹಿಷ್ಕರಿಸಲು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್​ ಸರ್ಕಾರ ಮುಂದಾಗಿದೆ.
ABP ಆನಂದ, ರಿಪಬ್ಲಿಕ್​ ಮತ್ತು TV9 ಸುದ್ದಿವಾಹಿನಿಗಳನ್ನು ಬಹಿಷ್ಕರಿಸಲು ಬಂಗಾಳ ಸರ್ಕಾರ ಮುಂದಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಟಿಎಂಸಿ, ABP ಆನಂದ, ರಿಪಬ್ಲಿಕ್​ ಮತ್ತು TV9 ಸುದ್ದಿವಾಹಿನಿಗಳು ದೆಹಲಿ ಜಮಿನ್ದಾರ್​ಗಳನ್ನು ಸಮಾಧಾನಪಡಿಸುವ ಉದ್ದೇಶದಿಂದ ಬಂಗಾಳ ವಿರೋಧಿ ಸುದ್ದಿಗಳನ್ನು ಬಿತ್ತರಿಸುತ್ತಿವೆ. ಬಂಗಾಳದ ಜನರನ್ನು ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ.
ಬಂಗಾಳದ ಜನತೆ ಈ ಅಪವಿತ್ರ ಬಂಗಳಾ ವಿರೋಧಿ ಅಜೆಂಡಾವನ್ನು ತರಿಸ್ಕರಿಸಿದ್ದಾರೆ. ಮತ್ತು ಬಂಗಾಳದ ಜನರಿಗೆ ಯಾವುದು ಸತ್ಯ ಎಂಬುದು ತಿಳಿದಿದೆ. ಈ ಮೂರು ಸುದ್ದಿವಾಹಿನಿಗಳಲ್ಲಿ ನಡೆಯುವ ಡಿಬೇಟ್​ಗಳಿಗೆ ನಮ್ಮ ಪಕ್ಷದಿಂದ ಯಾವುದೇ ವಕ್ತಾರರು, ಬೆಂಬಲಿಗರು ಹಾಗೂ ಕಾರ್ಯಕರ್ತರು ಭಾಗವಹಿಸಬಾರದು ಎಂದು ಆಲ್​ ಇಂಡಿಯಾ ತೃಣಮೂಲ ಕಾಂಗ್ರೆಸ್ ತಿಳಿಸಿದೆ.
ಇನ್ನು, ಸರ್ಕಾರದ ಈ ನಡೆಯನ್ನು ಭಾರತೀಯ ಜನತಾ ಪಕ್ಷ ತೀವ್ರವಾಗಿ ಖಂಡಿಸಿದೆ. ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ರಾಜ್ಯದ ಮಹಿಳೆಯರ ಸುರಕ್ಷತೆ ವಿಚಾರದಲ್ಲಿ ಸಂಪೂರ್ಣ ನಿರ್ಲಕ್ಷ್ಯ ತೋರುತ್ತಿದೆ. ಮತ್ತು ಅಪರಾಧಿಗಳಿಗೆ ಆಶ್ರಯ ನೀಡುವ ಕೆಲಸವನ್ನು ಮಾಡುತ್ತಿದೆ. ಬಂಗಾಳ ಸರ್ಕಾರ ಪತ್ರಿಕೋದ್ಯಮವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *