ಗದಗ:- ಬೈಕ್ ಮತ್ತು ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಅಸೂಟಿ ಗ್ರಾಮದ ಬಳಿ ಜರುಗಿದೆ.
ಜಗದೀಶ ಚಲವಾದಿ (24) ಮೃತ ದುರ್ದೈವಿ ಎನ್ನಲಾಗಿದೆ.ಯುವಕ ಕರಮುಡಿ ಗ್ರಾಮದವನಾಗಿದ್ದು ಹೊಳೆಆಲೂರಿನಿಂದ ಕರಮುಡಿ ಗ್ರಾಮಕ್ಕೆ ತೆರಳ್ತಿದ್ದಾಗ ಈ ಘಟನೆ ನಡೆದಿದೆ.
ರೋಣ ಡಿಪೋ ಸೇರಿದ ಸಾರಿಗೆ ಸಂಸ್ಥೆ ಬಸ್ ಇದಾಗಿದೆ ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಸ್ಥಳಕ್ಕೆ ರೋಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

