Breaking News

ಮಹತ್ವಾಕಾಂಕ್ಷಿ ಕೃಷಿ ಭಾಗ್ಯ ಯೋಜನೆಗೆ ರೈತರಿಂದ ಅರ್ಜಿ ಆಹ್ವಾನ

ಹುಬ್ಬಳ್ಳಿ: ಕೃಷಿ ಇಲಾಖೆಯಿಂದ 2024-25 ನೇ ಸಾಲಿನಲ್ಲಿ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಕೃಷಿ ಭಾಗ್ಯ ಯೋಜನೆಯನ್ನು ಮರು ಜಾರಿ ಮಾಡಲಾಗಿದೆ. ಈ ಯೋಜನೆಯಡಿ ಕೃಷಿ ಹೊಂಡ ಮತ್ತು ಇತರೆ ಘಟಕಗಳನ್ನು ಅಳವಡಿಸಿಕೊಳ್ಳಲು ಇಚ್ಛಿಸುವ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 20 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹಿಂದಿನ ವರ್ಷಗಳಲ್ಲಿ ಕೃಷಿ ಭಾಗ್ಯ ಯೋಜನೆಯಡಿ, ನರೇಗಾ, ತೋಟಗಾರಿಕೆ ಇಲಾಖೆ, ಇತರೆ ಸರ್ಕಾರದ ಯೋಜನೆಯಡಿ ಕೃಷಿ ಹೊಂಡ ನಿರ್ಮಿಸಿಕೊಂಡ ರೈತರು ಈ ಯೋಜನೆಗೆ ಅರ್ಹರಿರುವುದಿಲ್ಲ. ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸುವಂತೆ ಸಹಾಯಕ ಕೃಷಿ ನಿರ್ದೇಶಕರಾದ ಮಂಜುಳಾ ತೆಂಬದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *