Breaking News

ಮುಡಾ ಹಗರಣ: ಸಿಎಂ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೆ ಒಂದು ವಾರಕಾಲ ಹೈಕೋರ್ಟ್ ರಿಲೀಫ್ ನೀಡಿದ್ದು, ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ.
ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕ್ರಮ ಪ್ರಶ್ನಿಸಿ ಸಿದ್ದರಾಮಯ್ಯ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ಕೈಗೊಂಡಿರುವ ಹೈಕೋರ್ಟ್ ಏಕಸದಸ್ಯ ಪೀಠ, ಸುದೀರ್ಘ ವಾದ ಪ್ರತಿವಾದ ಆಲಿಸಿತು. ವಾದ ಮಂಡನೆ ಬಳಿಕ ನ್ಯಾಯಾಲಯ ಸೆ.9ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಇದೇ ವೇಳೆ ಸೆಪ್ಟೆಂಬರ್ 12ರಂದು ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಲಾಗುವುದು ಎಂದು ನ್ಯಾ.ನಾಗಪ್ರಸನ್ನ ಅವರಿದ್ದ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *