Breaking News

ರಾಷ್ಟ್ರಮಟ್ಟದಲ್ಲೂ ಮಿಂಚಲು ಸಜ್ಜಾದ ನಂದಿನಿ ಬ್ರ್ಯಾಂಡ್

ಬೆಂಗಳೂರು:- ಕರ್ನಾಟಕ ಹಾಲು ಒಕ್ಕೂಟ ಮಹಾಮಂಡಳ ಉತ್ಪಾದಿಸುವ ನಂದಿನಿ ಹಾಲನ್ನು ದೆಹಲಿಗೂ ಸರಬರಾಜು ಮಾಡುವಂತೆ ಬೇಡಿಕೆ ಬಂದಿದೆ. ನಂದಿನಿ ಹಾಲನ್ನು ರಾಷ್ಟ್ರ ರಾಜಧಾನಿ ದೆಹಲಿಗೂ ಕಳುಹಿಸುವಂತೆ ದೆಹಲಿ ಸರ್ಕಾರ ಮನವಿ ಮಾಡಿದೆ.
ಪ್ರತಿನಿತ್ಯ ದೆಹಲಿಗೆ 1 ಲಕ್ಷ ಲೀಟರ್ ಹಾಲನ್ನು ಸರಬರಾಜು ಮಾಡುವಂತೆ ದೆಹಲಿ ಸರ್ಕಾರದಿಂದ ಮನವಿ ಮಾಡಲಾಗಿದೆ. ದೇಶದ ಮೆಟ್ರೋ ಪಾಲಿಟಿನ್ ಸಿಟಿಯಾಗಿರುವ ದೆಹಲಿ ಕೇಂದ್ರಾಡಳಿತ ಪ್ರದೇಶ ಆಗಿದ್ದರೂ ಪ್ರತ್ಯೇಕ ಸರ್ಕಾರದ ವ್ಯವಸ್ಥೆಯನ್ನು ಹೊಂದಿದೆ. ಇಲ್ಲಿನ ಜನಸಂಖ್ಯೆಗೆ ಅನುಗುಣವಾಗಿ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಇನ್ನು ದೆಹಲಿಗೆ ಹತ್ತಿರದಲ್ಲಿರುವ ಗುಜರಾತ್ ರಾಜ್ಯದ ಅಮುಲ್ ಹಾಲು, ಮದರ್ ಡೈರಿಯ ಹಾಲನ್ನು ದೆಹಲಿಗೆ ಸರಬರಾಜು ಮಾಡಲಾಗುತ್ತಿದೆ. ಈಗ ದೆಹಲಿ ಸರ್ಕಾರದಿಂದಲೂ ಕೆಎಂಎಪ್‌ನ ನಂದಿನಿ ಹಾಲಿಗೆ ಡಿಮ್ಯಾಂಡ್ ಬಂದಿದೆ.
ರಾಜಧಾನಿ ದೆಹಲಿಯಲ್ಲಿ ಅಮುಲ್ ಹಾಗೂ ಮದರ್ ಡೈರಿ ಹಾಲನ್ನು ಹಿಂದಿಕ್ಕಿ ತನ್ನದೇ ದಾಖಲೆ ಬರೆಯಲು ಕರ್ನಾಟಕದ ನಂದಿನಿ ಹಾಲು ಸಿದ್ಧಗೊಂಡಿದೆ. ಮುಂದಿನ ತಿಂಗಳು ಅಕ್ಟೋಬರ್‌ನಿಂದ ದೆಹಲಿಯಲ್ಲಿ ಹಾಲು ಹಾಗೂ ಮೊಸರು ಮಾರಾಟಕ್ಕೆ ಸಜ್ಜಾಗಿರುವ ಕೆಎಂಎಫ್, ಈ ಮೂಲಕ ನಂದಿನಿ ಬ್ರ್ಯಾಂಡ್ ರಾಷ್ಟ್ರಮಟ್ಟದಲ್ಲೂ ಮಿಂಚಿಸಲು ಸಜ್ಜಾಗಿದೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *