ನವದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡತನ ರೇಖೆಗಿಂತ ಕೆಳಗಿರುವವರಿಗೆ ಪಡಿತರ ಚೀಟಿ ನೀಡುತ್ತವೆ. ಫಲಾನುಭವಿಗಳ ಆಹಾರ ಭದ್ರತೆಗಾಗಿ ಉಚಿತ ಪಡಿತರವನ್ನು ಒದಗಿಸುತ್ತದೆ. ಆದರೆ ಈಗ ಭಾರತ ಸರ್ಕಾರ ಈ ಯೋಜನೆಯಲ್ಲಿ ಪ್ರಮುಖ ಬದಲಾವಣೆಗಳನ್ನು ತರಲು ಹೊರಟಿದೆ.
ಈ ಹಿಂದೆ ಕೇಂದ್ರವು ಪಡಿತರ ಚೀಟಿದಾರರಿಗೆ ಉಚಿತ ಅಕ್ಕಿ ನೀಡುತ್ತಿತ್ತು. ಆದರೆ ಇದೀಗ ಉಚಿತ ಅಕ್ಕಿ ಬದಲಿಗೆ 9 ಅಗತ್ಯ ವಸ್ತುಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಭಾರತ ಸರ್ಕಾರದ ಉಚಿತ ಪಡಿತರ ಯೋಜನೆಯಡಿ ದೇಶದ 90 ಕೋಟಿ ಜನರಿಗೆ ಉಚಿತ ಪಡಿತರವನ್ನು ನೀಡಲಾಗುತ್ತಿದೆ. ಆಯಾ ರಾಜ್ಯ ಸರ್ಕಾರಗಳು ಪ್ರತ್ಯೇಕವಾಗಿ ಪಡಿತರ ನೀಡುತ್ತಿದೆ. ಈ ಹಿಂದೆ ಲಾನುಭವಿಗಳಿಗೆ ಉಚಿತವಾಗಿ ಅಕ್ಕಿ ನೀಡಲಾಗುತ್ತಿತ್ತು. ಆದರೆ ಇದೀಗ ಕೆಲವು ಸುದ್ದಿಗಳ ಪ್ರಕಾರ ಪಡಿತರ ಚೀಟಿದಾರರಿಗೆ ಉಚಿತ ಅಕ್ಕಿ ಬದಲು 9 ಅಗತ್ಯ ವಸ್ತುಗಳನ್ನು ನೀಡಲು ಸರ್ಕಾರ ಮುಂದಾಗಿದೆ.
ಇವುಗಳಲ್ಲಿ ಗೋಧಿ, ಕಾಳುಗಳು, ಧಾನ್ಯಗಳು, ಸಕ್ಕರೆ, ಉಪ್ಪು, ಸಾಸಿವೆ ಎಣ್ಣೆ, ಹಿಟ್ಟು, ಸೋಯಾಬೀನ್ ಮತ್ತು ಮಸಾಲೆಗಳು ಸೇರಿವೆ ಎಂದು ತಿಳಿದು ಬಂದಿದೆ.ಕೆಲವು ವರದಿಗಳ ಪ್ರಕಾರ, ಉಚಿತ ಅಕ್ಕಿ ಬದಲಿಗೆ ಈ ಸರಕುಗಳನ್ನು ನೀಡಲಾಗುವುದು ಎಂದು ಹೇಳಿದರೆ, ಇನ್ನೂ ಕೆಲವು ವರದಿಗಳು ಅಕ್ಕಿಯೊಂದಿಗೆ ಇತರ ಒಂಬತ್ತು ರೀತಿಯ ಅಗತ್ಯ ವಸ್ತುಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ. ಜನರ ಆರೋಗ್ಯವನ್ನು ಸುಧಾರಿಸಲು ಮತ್ತು ಅವರ ಆಹಾರದಲ್ಲಿ ಪೌಷ್ಟಿಕಾಂಶದ ಮಟ್ಟವನ್ನು ಹೆಚ್ಚಿಸಲು ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಇದರಿಂದ ಜನರ ಜೀವನ ಮಟ್ಟವೂ ಸುಧಾರಿಸುತ್ತದೆ ಎಂದು ಹೇಳಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

