Breaking News

ಗಣೇಶ ಚತುರ್ಥಿ , ಈದ್ ಮಿಲಾದ್ ಹಬ್ಬದ ಶಾಂತಿ ಸಭೆ: ಹಲವು ಗಣ್ಯರು ಭಾಗಿ

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷ್ನರೇಟ್ ವ್ಯಾಪ್ತಿಯಲ್ಲಿ ಪೊಲೀಸ್ ಆಯುಕ್ತ ಶಶಿಕುಮಾರ್ ನೇತೃತ್ವದಲ್ಲಿ ನಗರದ ಸವಾಯಿ ಗಂಧರ್ವ ಸಭಾಭವನದಲ್ಲಿ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಶಾಂತಿ ಸಭೆ ನಡೆಯುತ್ತು.

ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು . ಶಾಂತಿ, ಸೌಹಾರ್ದತೆಯಿಂದ ಹಬ್ಬ ಆಚರಣೆಗಾಗಿ ಸಭೆ ನಡೆಸಲಾಯಿತು. ಹಲವು ಗಣೇಶ ಪ್ರತಿಷ್ಠಾಪನಾ ಸಂಘಟನೆ ಭಾಗಿಯಾಗಿದ್ದರು.ಹಬ್ಬದ ವೇಳೆ ಬೇಕಾದ ಮೂಲಭೂತ ಸೌಕರ್ಯ ನೀಡಲು ಮನವಿ ಸಲ್ಲಿಸಲಾಯಿತು. ಚಎರಡೂ ಹಬ್ಬಗಳನ್ನು ಸೌಹಾರ್ದಯುತವಾಗಿ ಆಚರಿಸಬೇಕು ಎಂದು ಸಭೆಯಲ್ಲಿ ಸಲಹೆ ನೀಡಿದರು. ಗಣೇಶ ಪೆಂಡಾಲ್ ಗಳಲ್ಲಿ ಗುಟ್ಕಾ ಜಾಹಿರಾತು ಹಾಕದಿರುವಂತೆ ಆಗ್ರಹಿಸಿದರು. ವ

ಮೂರು ಸಾವಿರ ಮಠದ ಗುರುಸಿದ್ಧರಾಜಯೋಗಿಂದ್ರ ಸ್ವಾಮೀಜಿ ಹಾಗೂ ಸರ್ವಧರ್ಮದ ಗುರುಗಳು ,
ಅಂಜುಮನ್ ಸಂಸ್ಥೆ ಅಧ್ಯಕ್ಷ, ಮಾಜಿ ಸಚಿವ ಎ.ಎಂ ಹಿಂಡಸಗೇರಿ,, ಪಾಲಿಕೆ ಆಯುಕ್ತ ಈಶ್ವರ್ ಉಳ್ಳಾಗಡ್ಡಿ , ಹಲವು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ , ಸಂಘಟನೆಗಳ ನೂರಾರು ಜನರು ಇತರರು ಭಾಗಿಯಾಗಿದ್ದರು.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *