ಹುಬ್ಬಳ್ಳಿ: ಹು-ಧಾ ಬೈಪಾಸ್ ರಸ್ತೆ ನಿರ್ವಹಣೆ ಮತ್ತು ರಸ್ತೆ ಬಳಕೆದಾರರ ಶುಲ್ಕ ಆಕರಣೆ (ಟೋಲ್) ಗುತ್ತಿಗೆ ಪಡೆದಿದ್ದ ನಂದಿ ಹೈವೇ ಡೆವಲಪರ್ಸ್ ಲಿಮಿಟೆಡ್ ತನ್ನ ಗುತ್ತಿಗೆ ಅವಧಿ ಮುಗಿದಿರುವುದರಿಂದ ಸೆಪ್ಟೆಂಬರ್ 7 ರಿಂದ ಟೋಲ ಸಂಗ್ರಹ ಸ್ಥಗಿತಗೊಳಿಸಲಿದೆ.
ಬೈಪಾಸ್ ನಿರ್ವಹಣೆ ಮತ್ತು ಟೋಲ್ ಸಂಗ್ರಹ ಕಾರ್ಯ ಸ್ಥಗಿತಗೊಳಿಸಲಿದ್ದು, 1998ರಿಂದಲೂ ಈ ಬೈಪಾಸ್ ನಿರ್ವಹಣೆ ಮತ್ತು ಟೋಲ್ ಸಂಗ್ರಹಣೆ ಕಾರ್ಯ ನಿರ್ವಹಿಸಿದ್ದ ನೌಕರರನ್ನು ಸೇವೆಯಿಂದ ಬಿಡುಗಡೆಗೊಳಿಸುವ ನಿರ್ಧಾರ ಪ್ರಕಟಿಸಿದೆ. ಈ ಕುರಿತು ಸುತ್ತೋಲೆಯನ್ನೇ ತನ್ನ ನೌಕರರಿಗೆ ಹೊರಡಿಸಿರುವ ಕಂಪನಿಯ ಕಾರ್ಯಕಾರಿ ನಿರ್ದೇಶಕ ಶಿವಕುಮಾರ ಖೇಣಿ, ಸೆಪ್ಟೆಂಬರ್ 7 ರಿಂದ ರಸ್ತೆ ಬಳಕೆದಾರರ ಶುಲ್ಕ ಆಕರಣೆ ಕಾರ್ಯ ಸಂಪೂರ್ಣ ಸ್ಥಗಿತಗೊಳ್ಳಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

