Breaking News

ಎತ್ತಿನಹೊಳೆ ಏತ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ: ಪರಮೇಶ್ವರ್

ಬೆಂಗಳೂರು: ಬಹುನಿರೀಕ್ಷಿತ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಏತ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ನಡೆದಿದೆ. ಒಂದು ಹಂತದ ಕಾಮಗಾರಿ ಮುಗಿದ ಹಿನ್ನೆಲೆ ಸೆ.6 ರಂದು ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.
ಹಾಸನ ಜಿಲ್ಲೆ ಸಕಲೇಶಪುರದ ಕೆಸವನಹಳ್ಳಿ ಗ್ರಾಮದ ಕುಂಬರಡಿ ಕಾಫಿ ಎಸ್ಟೇಟ್ ಬಳಿ ಎತ್ತಿನಹೊಳೆ ಯೋಜನೆಯ ಪರೀಕ್ಷಾರ್ಥ ನೀರು ಹರಿಸುವ ಕಾರ್ಯಚರಣೆಯನ್ನು ಈಗಾಗಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಪರಿಶೀಲಿಸಿದ್ದಾರೆ. ಸೆ.6 ಗೌರಿ ಹಬ್ಬದಂದು ಚಾಲನೆ ನೀಡಲಾಗುತ್ತದೆ. ಚಾಲನೆ ನೀಡಿದ ಬಳಿಕ ಸುಮಾರು 1500 ಕ್ಯೂಸೆಕ್‌ ನೀರು ವಾಣಿ ವಿಲಾಸ ಸಾಗರಕ್ಕೆ ಹರಿಯುತ್ತದೆ ಎಂದು ಅವರು ತಿಳಿಸಿದರು.
ಇನ್ನು ಎರಡನೇ ಹಂತದ ಕಾಮಗಾರಿ ಬಾಕಿ ಇದ್ದು, ಪೈಗಳನ್ನು ಅಳವಡಿಸಬೇಕಾಗಿದೆ. ವೇಗವಾಗಿ ಕೆಲಸ ನಡೆಯುತ್ತಿದೆ. ಈ ಕಾಮಗಾರಿ ಆದ ಬಳಿಕ ಅರಸೀಕೆರೆ, ತುಮಕೂರು, ಕೋಲಾರ ಮತ್ತುಚಿಕ್ಕಬಳ್ಳಾಪುರ ಕಡೆ ನೀರನ್ನು ಹರಿಸುತ್ತೇವೆ. ಮುಂದಿನ ಮಳೆಗಾಲದರೊಳಗೆ ಕಾಮಗಾರಿ ಪೂರ್ಣಗೊಳ್ಳುತ್ತದೆ ಎಂದು ಪರಮೇಶ್ವರ್‌ ಹೇಳಿದರು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *