Breaking News

ಚೆನೈ ತ್ಯಾಜ್ಯ ನಿರ್ವಹಣೆ ಅಧ್ಯಯನಕ್ಕೆ ಭೇಟಿ ನೀಡಿದ ಡಿಕೆಶಿ

ಚೆನೈ: ಚೆನೈನ ಚೆಟ್​ಪೇಟೆಯಲ್ಲಿರುವ ಬಯೋ ಸಿಎನ್​ಜಿ ಘಟಕಕ್ಕೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿದ್ದು ಘನ ತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆ ಸಂಬಂಧ ಮಾಹಿತಿ ಪಡೆದಿದ್ದಾರೆ.
ಈ ವೇಳೆ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಘನ ತ್ಯಾಜ್ಯ ನಿರ್ವಹಣೆಯಲ್ಲಿ ಚೆನ್ನೈ ಮಾದರಿ ಅಧ್ಯಯನ ಮಾಡಲು ನಾನು ನನ್ನ ತಂಡದೊಂದಿಗೆ ಇಲ್ಲಿಗೆ ಬಂದಿದ್ದೇವೆ, ಇಲ್ಲಿನ ತ್ಯಾಜ್ಯ ನಿರ್ವಹಣೆಯಿಂದ ಸಾಕಷ್ಟು ವಿಚಾರಗಳನ್ನು ತಿಳಿದುಕೊಂಡಂತಾಯಿತು.ಕಳೆದ ಒಂದು ವರ್ಷದಿಂದ ಭೇಟಿ ನೀಡಬೇಕು ಎಂದುಕೊಂಡಿದ್ದೆ. ಈಗ ಸಮಯ ಸಿಕ್ಕ ಕಾರಣಕ್ಕೆ ಭೇಟಿ ನೀಡಿದ್ದೇನೆ. ನಮ್ಮ ರಾಜ್ಯದಲ್ಲೂ ಒಂದಷ್ಟು ಇಲ್ಲಿನ ಉತ್ತಮ ಅಂಶಗಳನ್ನು ಅಳವಡಿಸಿಕೊಳ್ಳಲಾಗುವುದು ಎಂದರು.
ಅನೇಕ ಕಡೆ ಘನ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಯಶಸ್ಸು ಕಂಡಿಲ್ಲ. ನಮ್ಮಲ್ಲಿಯೂ 10 ಕಡೆ ಕಸದಿಂದ ವಿದ್ಯುತ್ ಉತ್ಪಾದನೆಗೆ ಅವಕಾಶ ನೀಡಲಾಗಿತ್ತು. ಈ ಹಿಂದೆ ಹೈದರಾಬಾದ್​ಗೆ ಭೇಟಿ ನೀಡಿದ್ದೆ. ಇಲ್ಲಿ ನಗರದ ನಡುವೆಯೇ ಸಿಎನ್ ಜಿ ಉತ್ಪಾದನಾ ಘಟಕವನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ. ನಮ್ಮಲ್ಲೂ ಒಂದಷ್ಟು ಒಳ್ಳೆ ಕೆಲಸ ಮಾಡಿದ್ದೇವೆ ಎಂದರು.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *