Breaking News

ಅತ್ಯಾಚಾರ ವಿರೋಧಿ ಮಸೂದೆಯನ್ನು ಅಂಗೀಕರಿಸಿದ ಪಶ್ಚಿಮ ಬಂಗಾಳ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯು ಇಂದು ಹೊಸದಾಗಿ ಪ್ರಸ್ತಾಪಿಸಿದ ಅತ್ಯಾಚಾರ ವಿರೋಧಿ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಬಿಜೆಪಿ ನಾಯಕ ಮತ್ತು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು ಮಸೂದೆಗೆ ತಿದ್ದುಪಡಿಗಳನ್ನು ಪ್ರಸ್ತಾಪಿಸಿದ್ದಾರೆ.
ಕಳೆದ ತಿಂಗಳು ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಕೊಲೆಯಾದ ಹಿನ್ನೆಲೆಯಲ್ಲಿ ಟಿಎಂಸಿ ಸರ್ಕಾರ ಎರಡು ದಿನಗಳ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆದಿದೆ. ಇಂದು ಬೆಳಿಗ್ಗೆ ಮಸೂದೆಯನ್ನು ಮಂಡಿಸಿದ ನಂತರ, ಸಿಎಂ ಮಮತಾ ಬ್ಯಾನರ್ಜಿ ಮಸೂದೆಯ ಪರ ಮಾತನಾಡಿದರು ಮತ್ತು ಮಸೂದೆಯನ್ನು ಮಾದರಿ ಮತ್ತು ಐತಿಹಾಸಿಕ ಎಂದು ಶ್ಲಾಘಿಸಿದ್ದಾರೆ. ವಿಧೇಯಕ ಕಾಕಾನೂನಾಗಿ ರೂಪುಗೊಂಡ ನಂತರ ರಾಜ್ಯ ಪೊಲೀಸರ ವಿಶೇಷ ಘಟಕ ಅಪರಾಜಿತಾ ಟಾಸ್ಕ್ ಫೋರ್ಸ್ ನ್ನು ರಚಿಸಲಾಗುವುದು ಎಂದು ಹೇಳಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *