Breaking News

ಗಣೇಶ ಹಬ್ಬ: ಪ್ರಯಾಣಿಕರಿಗೆ ಊರಿಗೆ ತೆರಳಲು ವಿಶೇಷ ರೈಲು ಸೇವೆ

ಬೆಂಗಳೂರು: ಗೌರಿ ಗಣೇಶ ಹಬ್ಬದ ಪ್ರಯುಕ್ತ ಊರಿಗೆ ಹೋಗುವವರಿಗೆ ರೈಲ್ವೆ ಇಲಾಖೆಯಿಂದ ಸಿಹಿ ಸುದ್ದಿ ನೀಡಲಾಗಿದೆ. ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರ ಸಂಖ್ಯೆ ಹೆಚ್ಚಿರಲಿದೆ ಎಂಬುದನ್ನು ಮನಗಂಡ ರೈಲ್ವೆ ಇಲಾಖೆಯು ಭುವನೇಶ್ವರ ಬೆಳಗಾವಿ ನಡುವೆ ವಿಶೇಷ ರೈಲು ಸೇವೆಯನ್ನು ನೀಡಲು ಮುಂದಾಗಿದೆ.
ನಮ್ಮ ದೇಶದಲ್ಲಿ ಗೌರಿ ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಇನ್ನು ಹುಬ್ಬಳ್ಳಿ ಧಾರವಾಡ, ಬೆಳಗಾವಿ, ಗೋವಾ, ಮುಂಬೈ ನಗರಗಳಲ್ಲಿ ಗಣೇಶ ಹಬ್ಬವನ್ನು ಜಾತ್ರೆಗಿಂತಲೂ ದೊಡ್ಡ ಮಟ್ಟದಲ್ಲಿ ಆಚರಣೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕೆಲಸ ಮಾಡುವ ಸ್ಥಳದಿಂದ ಊರಿಗೆ ಹೋಗುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆ ಇಲಾಖೆ ವಿಶೇಷ ರೈಲು ಸೇವೆ ನೀಡಲು ಮುಂದಾಗಿದೆ.

Share News

About BigTv News

Check Also

ರಾಜಕೀಯ ಮರೆತು ಮಾನವೀಯತೆ ಮೆರೆದ ಕ್ಷಣ: ಚೆನ್ನಮ್ಮ ಅಂತಿಮ ದರ್ಶನದ ವೇಳೆ ದೇವೇಗೌಡರ ಕೈಹಿಡಿದು ಸಿದ್ದರಾಮಯ್ಯ ಸಾಂತ್ವನ

ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಮಾನವೀಯತೆ ಎಲ್ಲಕ್ಕಿಂತ ದೊಡ್ಡದು ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಘಟನೆ ಸಾಕ್ಷಿಯಾಯಿತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ …

Leave a Reply

Your email address will not be published. Required fields are marked *