Breaking News
Featured Video Play Icon

ವರೂರಿನಲ್ಲಿ ಲೋಕ ಕಲ್ಯಾಣಕ್ಕೆ ಮಹಾ ಮಸ್ತಕಾಭೀಷೇಕ..

ಹುಬ್ಬಳ್ಳಿ: ಇಲ್ಲಿಯ ವರೂರಿನ ಗ್ರಾಮದಲ್ಲಿ ಗುಣಧರನಂದಿ ಮಹಾರಾಜರ ನೇತೃತ್ವದಲ್ಲಿ ಜೈನ ತೀರ್ಥಂಕರರ ಸಮಾಗಮದಲ್ಲಿ 2025ರ ಜನವರಿ 15ರಿಂದ 26ರ ವರೆಗೆ ಮಹಾ ಮಸ್ತಕಾಭೀಷೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಮಹೋತ್ಸವ ಮುಹೂರ್ತ ಉದ್ಘೋಷ ಕಾರ್ಯಕ್ರಮದಲ್ಲಿ ಮಹಾ ಮಸ್ತಕಾಭೀಷೇಕದ ದಿನಾಂಕ ನಿಗದಿ ಮಾಡಲಾಗಿದ್ದು,‌ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಮಹಾ ಮಸ್ತಕಾಭೀಷೇಕದ ಅಧ್ಯಕ್ಷರನ್ನಾಗಿ ಕೂಡ ಘೋಷಣೆ ಮಾಡಲಾಯಿತು. ಅಲ್ಲದೇ ಇದೇ ವೇಳೆ ವೀರೇಂದ್ರ ಹೆಗ್ಗಡೆಯವರಿಗೆ ಜವಾಬ್ದಾರಿ ವಹಿಸುವ ಮೂಲಕ ಸನ್ಮಾನಿಸಿ ಗೌರವ ಸಮರ್ಪಣೆ ಮಾಡಲಾಯಿತು.

ಇನ್ನೂ ಹನ್ನೆರಡು ವರ್ಷಗಳ ಬಳಿಕ ನಡೆಯುವ ಮಹಾ ಮಸ್ತಕಾಭೀಷೇಕದ ವಿಶೇಷತೆ ಎಂದರೇ ಒಂದು ಯುಗ ಪೂರ್ಣಗೊಂಡ ಬೆನ್ನಲ್ಲೇ ಮಹಾ‌ ಮಸ್ತಕಾಭೀಷೇಕ ಅವಧಿ ನಿಗದಿ ಮಾಡಲಾಗುತ್ತದೆ. ಹುಬ್ಬಳ್ಳಿಯ ವರೂರಿನಲ್ಲಿ ನಡೆಯುವ ಮಸ್ತಕಾಭೀಷೇಕ 27 ಪದಾರ್ಥ, 18 ದಿಗಂಬರ ಆಚಾರ್ಯರು, ಶ್ವೇತಾಂಬರ, ದಿಗಂಬರ ಹಾಗೂ ಮೂರ್ತಿಪೂಜಕರು ಆಗಮಿಸುವ ಮೂಲಕ ಕಾರ್ಯಕ್ರಮ ಅದ್ದೂರಿಯಾಗಿ ನಡೆಸಲು ನಿರ್ಧಾರ ಮಾಡಲಾಗಿದೆ. ಒಂಬತ್ತು ದೇಶಗಳ ಮೂಲಕ ಒಂಬತ್ತು ತರಹದ ಹೂವುಗಳಿಂದ ಪುಷ್ಪ ವೃಷ್ಟಿ ಮಾಡಲಾಗುತ್ತದೆ. ಸರ್ವಧರ್ಮ ಸಮ್ಮೇಳನದ ಜೊತೆಗೆ ಜೈನ್ ಸಾಹಿತ್ಯ ಸಮ್ಮೇಳನ ಕೂಡ ನಡೆಸಲಾಗುತ್ತದೆ. 24 ಆನೆ‌, ಕುದುರೆ ಹಾಗೂ 108 ರಥದಿಂದ ಮಹಾ ಮೆರವಣಿಗೆ ಮಾಡಲಾಗುತ್ತದೆ ಎಂಬುವುದು ಮಹಾ ಮಸ್ತಕಾಭೀಷೇಕದ ವಿಶೇಷತೆ.

Share News

About Shaikh BigTv

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *