Breaking News

ತುಮಕೂರಿನಲ್ಲಿ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ

ತುಮಕೂರು : ನಗರದಲ್ಲಿ ಇಂದು ಸರ್ಕಾರದಿಂದ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನಡೆಯಿತು. ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ‌ಹೆಬ್ಬಾಳ್ಕರ್ ಅವರು ಭಾಗವಹಿಸಿ ಮಡಿಲು ತುಂಬಿದ್ದಾರೆ. ಈ ಸಂದರ್ಭದಲ್ಲಿ ಮಗುವಿನ ಆಗಮನದಲ್ಲಿರುವ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ‌ಹೆಬ್ಬಾಳ್ಕರ್ ಶುಭ ಕೋರಿದ್ದಾರೆ.
ತುಮಕೂರಿನ ಬಾಲಭವನದ ಆವರಣದಲ್ಲಿ ಇಂದು ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು.ಪಟಾಕಿ ಸಿಡಿಸಿ ಪೂರ್ಣ ಕುಂಭದ ಸ್ವಾಗತ ಕೋರಲಾಯಿತು.
ಇದೇ ಸಂದರ್ಭದಲ್ಲಿ ಮಹಿಳಾ ‌ಮತ್ತು ಕಲ್ಯಾಣ ಇಲಾಖೆ ವತಿಯಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿವಿಧ ಸವಲತ್ತುಗಳನ್ನು ವಿತರಣೆ ಮಾಡಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಜಿಪಂ‌ ಸಿಇಓ ಪ್ರಭು ಹಾಗೂ ಮಹಿಳಾ‌ ಮತ್ತು ಕಲ್ಯಾಣ ಇಲಾಖೆ ಅಧಿಕಾರಿಗಳು ಮಹಿಳೆಯರು ಸಾಥ್‌ ನೀಡಿದರು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *