Breaking News

ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಐಎಎಸ್ ಕೆಎಎಸ್ ಸ್ಪರ್ಧಾತ್ಮಕ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಪ್ರಸಕ್ತ ಸಾಲಿನ ‌ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಐ.ಎ.ಎಸ್, ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ 2024-25 ನೇ ಸಾಲಿಗೆ ಐ.ಎ.ಎಸ್/ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಸೇವಾಸಿಂಧು ಪೋರ್ಟಲ್ನಲ್ಲಿ (https://sevasindhu.karnataka.gov.in) ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಕೋರಿದೆ.
ಅಭ್ಯರ್ಥಿಗಳು ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು (ಮುಸ್ಲಿಂ, ಕ್ರ್ರಿಶ್ಚಿಯನ್, ಬೌದ್ಧ, ಜೈನ್, ಪಾರ್ಸಿ, ಸಿಖ್). ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಯ ವಯೋಮಿತಿ 21 ರಿಂದ 35 ವರ್ಷಗಳು ಮೀರಿರಬಾರದು. (ಅರ್ಜಿ ಸಲ್ಲಿಸುವ ಅಂತಿಮ ದಿನಾಂಕದೊಳಗೆ). ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 10 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ: 08272-225528/220214 ನ್ನು ಸಂಪರ್ಕಿಸಲು ತಿಳಿಸಿದ್ದಾರೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *