Breaking News

ಗಣೇಶ ಹಬ್ಬದೊಳಗೆ ಅಂಗನವಾಡಿ ಸಿಬ್ಬಂದಿಗೆ ಬಾಕಿ ವೇತನ: ಲಕ್ಷ್ಮೀ ಹೆಬ್ಬಾಳ್ಕರ್

ತುಮಕೂರು: ಗಣೇಶ ಹಬ್ಬದ ಒಳಗೆ ಕೋಲಾರ, ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಬಾಕಿ ವೇತನ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಳ ಆಗದ ವಿಚಾರಕ್ಕೆ ನಗರದ ಬಾಲಭವನ ಆವರಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದ ಬಳಿಕ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಅನುದಾನದಲ್ಲಿ ಸಂಬಳ ಕೊಡಲಾಗುತ್ತದೆ. ಈ ರೀತಿಯ ಸಮಸ್ಯೆ ಆಗುತ್ತಿರುವುದು ಇದೇ ಮೊದಲಲ್ಲ. ಕೇಂದ್ರ‌ ಸರ್ಕಾರ ಬಿಡುಗಡೆ ಮಾಡಿದಾಗ ನಾವು ರಾಜ್ಯ ಸರ್ಕಾರದ ಮೊತ್ತ ಸೇರಿಸಿ ಸಂಬಳ ನೀಡಬೇಕಾಗುತ್ತದೆ. ಕೇಂದ್ರದಿಂದ ಹಣ ಇನ್ನೂ ಬಂದಿಲ್ಲ. ಈಗಾಗಲೇ ನಾವು ಮೂರು ನಾಲ್ಕು ಬಾರಿ ಪತ್ರ ಬರೆದಿದ್ದೇವೆ ಎಂದು ಹೇಳಿದರು.
ನಮ್ಮ ಇಲಾಖೆ ನಿರ್ದೇಶಕರು ಮೊನ್ನೆಯಷ್ಟೇ ದೆಹಲಿಗೆ ಹೋಗಿ ಬಂದಿದ್ದಾರೆ. ಆದಷ್ಟು ಬೇಗ ನೀಡಲಾಗುವುದು. ಗಣಪತಿ ಹಬ್ಬದ ಒಳಗೆ ಸಂಬಳ ನೀಡುವ ಪ್ರಯತ್ನಿಸಲಾಗುವುದು. ನಮ್ಮ ಇಲಾಖೆಯಲ್ಲಿ ಬಹಳಷ್ಟು ಯೋಜನೆಗಳಿಗೆ ಎರಡೂ ಸರ್ಕಾರದ ಅನುದಾನ ಬಳಕೆ ಆಗುತ್ತದೆ. ವಿಳಂಬ ಮೊದಲಿನಿಂದಲೂ ಆಗಿದೆ, ಇನ್ಮುಂದೆ ಈ ರೀತಿ ಆಗದ ಹಾಗೆ ನೋಡಿಕೊಳ್ಳಲಾಗುವುದು ಎಂದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *