ಬೆಂಗಳೂರು: ಸಾಲು ಸಾಲು ರಜೆ ಬಂತು ಅಂದರೆ ಖಾಸಗಿ ಬಸ್ಗಳಿಗೆ ಹಬ್ಬವೋ ಹಬ್ಬ ಎರಡ್ಮೂರು ಪಟ್ಟು ದರ ಏರಿಕೆ ಮಾಡಿ ಜನರಿಂದ ವಸೂಲಿ ಶುರುವಾಗುತ್ತದೆ. ಈಗ ಮತ್ತದೇ ಚಾಳಿ ಮುಂದುವರಿದಿದ್ದು , ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೊರಡುವ ಪ್ರಯಾಣಿಕರಿಗೆ ಶಾಕ್ ಎದುರಾಗಿದೆ.
ಗೌರಿ ಗಣೇಶ, ದಸರಾ, ದೀಪಾವಳಿ, ಸಂಕ್ರಾಂತಿ ಹೀಗೆ ಹಬ್ಬಗಳ ಸೀಸನ್ ಬಂತು ಅಂದರೆ ಖಾಸಗಿ ಬಸ್ ಮಾಲೀಕರಿಗೆ ಭರ್ಜರಿ ಲಾಟರಿ. ಸಿಕ್ಕಿದ್ದೇ ಚಾನ್ಸ್ ಎಂದು ಜನರಿಂದ ಸುಲಿಗೆಗೆ ಇಳಿಯುತ್ತಾರೆ. ರಜೆ ಎಂದು ಮನೆ ಕಡೆ ಹೊರಟವರ ಜೇಬಿಗೆ ಕನ್ನ ಹಾಕುತ್ತಾರೆ. ಹೀಗೆ ಅವಕಾಶ ಸಿಕ್ಕಗಾಲೆಲ್ಲ ದರ ಏರಿಸುವ ಖಾಸಗಿ ಬಸ್ ಮಾಲೀಕರು ವಿಘ್ನ ವಿನಾಯಕ ಗಣೇಶ ಹಬ್ಬಕ್ಕೆ ಎರಡ್ಮೂರು ದಿನಗಳ ರಜೆ ಇದೆ ಎಂದು ಮನೆ ಕಡೆ ಹೋಗಲು ಸಜ್ಜಾದವರಿಗೆ ಖಾಸಗಿ ಟಿಕೆಟ್ ದರ ಏರಿಕೆ ಶಾಕ್ ನೀಡಿದ್ದಾರೆ.
ಸೆಪ್ಟೆಂಬರ್ 6 ಶುಕ್ರವಾರ ಗೌರಿ ಹಬ್ಬ 7 ರಂದು ಗಣೇಶನ ಹಬ್ಬ. ಭಾನುವಾರ ಹೇಗೂ ರಜೆ ಹೀಗಾಗಿ ಐದರಂದು ಊರಿಗೆ ತೆರಳಲು ಜನರು ಪ್ಲಾನ್ ಮಾಡಿದ್ದಾರೆ. ಆದರೆ ಖಾಸಗಿ ಬಸ್ಗಳಲ್ಲಿ ದುಪ್ಪಟ್ಟು ದರ ಏರಿಕೆ ಆಗಿರುವುದಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

