Breaking News

ವಾಹನಗಳಿಗೆ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಲು ಸೆ.15 ರವರೆಗೆ ಕಾಲಾವಕಾಶ

ಬೆಂಗಳೂರು: ರಾಜ್ಯದಲ್ಲಿ ಎಚ್​ಎಸ್​ಆರ್​ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದ್ದು ಎಚ್ಎಸ್ಆರ್ಪಿ ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗುತ್ತದೆ ಹಾಗೂ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ.
2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್‌ಎಸ್‌ಆರ್ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಕಳೆದ ವರ್ಷ ಆಗಸ್ಟ್ನಲ್ಲಿ ಅಧಿಸೂಚನೆ ಹೊರಡಿಸಿತ್ತು.ಹಳೆ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಕೆಗೆ ಸೆಪ್ಟೆಂಬರ್‌ 15ರವರೆಗೆ ಗಡುವು ವಿಸ್ತರಿಸಲಾಗಿದೆ. 2019ರ ಏಪ್ರಿಲ್‌ 1ಕ್ಕೂ ಮುನ್ನ ನೋಂದಣಿಯಾಗಿರುವ ಎಲ್ಲಾ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಬೇಕು.
ಪೊಲೀಸ್ ಇಲಾಖೆ ಜೊತೆಗೂಡಿ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಅವಧಿಯೊಳಗೆ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ 500 ರೂ.ನಿಂದ 1,000 ರೂ.ವರೆಗೆ ದಂಡ ವಿಧಿಸಲಿದೆ ಎಂದು ತಿಳಿಸಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *