Breaking News

ಜಿಲ್ಲಾ ಕೌಶಲ್ಯ ಸಮಿತಿ ಸಭೆ ಜಿಲ್ಲೆಯಲ್ಲಿ ಯುವನಿಧಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಿ: ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ

ಧಾರವಾಡ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳೊಂದಿಗೆ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕೌಶಲ್ಯ ಸಮಿತಿ ಸಭೆಯು ಜರುಗಿತು.

ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಯುವನಿಧಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಲು ಸೂಚಿಸಿದರು. 2024 ರಲ್ಲಿ ಪದವಿ ಪಾಸಾದ, ಡಿಪ್ಲೋಮಾ ವಿದ್ಯಾರ್ಥಿಗಳು ಎನ್‍ಎಡಿ ದಲ್ಲಿ ನೋಂದಣೆ ಮಾಡಿಕೊಳ್ಳಲು ಹೆಚ್ಚು ಪ್ರಚಾರ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಸಿ.ಎಂ.ಕೆ.ಕೆ.ವೈ ಹಾಗೂ ಇಂಡಸ್ಟ್ರಿ ಲಿಂಕೆಜ್ ಸೇಲ್ ಆಧಾರಿತ ತರಬೇತಿ ಕಾರ್ಯಕ್ರಮದ ಅನುಷ್ಟಾನ ಹಾಗೂ ನಲ್ ಜಲ್ ಮಿತ್ರ ಸೇರಿದಂತೆ ವಿವಿಧ ಯೋಜನೆಗಳನ್ನು ಜಿಲ್ಲೆಯಲ್ಲಿ ಅನುಷ್ಟಾನಗೊಳಿಸುವ ಕುರಿತು ಸಭೆಯಲ್ಲಿ ಸವಿಸ್ತಾರವಾಗಿ ಚರ್ಚಿಸಿದರು.
ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ರವೀಂದ್ರ ದ್ಯಾಬೇರಿ ಅವರು ಪ್ರಾಸ್ತವಿಕವಾಗಿ ಮಾತನಾಡಿ, ಧಾರವಾಡ ಜಿಲ್ಲೆಯಲ್ಲಿ ಐ.ಟಿ.ಐ., ಜಿ.ಟಿ.ಟಿ.ಸಿ, ಕೆ.ಜಿ.ಟಿ.ಟಿ.ಐ, ರುಡ್‍ಸೆಟ್, ಸಿಡಾಕ್,ಎ.ಟಿ.ಡಿ.ಸಿ ಸರಕಾರಿ ಸಂಸ್ಥೆಗಳಲ್ಲಿ ಜರುಗಿಸುವ ಅಲ್ಪಾವಧಿ ಮತ್ತು ದೀರ್ಘಾವಧಿಯ ತರಬೇತಿಗಳ ಕುರಿತು ಹಾಗೂ ಧಾರವಾಡ ಜಿಲ್ಲೆಯ ಸ್ಕೀಲ್ ಇಕೊ ಸಿಸ್ಟಮ್ ಬಗ್ಗೆ ವಿವರಿಸಿದರು.
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಒಟ್ಟು 18 ಜಾಬ್‍ರೋಲ್‍ಗಳಿಗೆ ಒಟ್ಟು, 1,23,230 ವಿದ್ಯಾರ್ಥಿಗಳು ನೋಂದಾಯಿಸಿದ್ದು, ಎರಡು ಸರಕಾರಿ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳಲ್ಲಿ ತರಬೇತಿಗಳನ್ನು ಪ್ರಾರಂಭಿಸಲಾಗಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಕೈಗಾರಿಕೆ ಇಲಾಖೆಯ ಜಂಟಿ ನಿರ್ದೆಶಕರು, ಧಾರವಾಡ ಜಿ.ಟಿ.ಟಿ.ಸಿ ಪ್ರಾಂಶುಪಾಲರು, ಕೃಷಿ ಇಲಾಖೆಯ ಜಂಟಿನಿರ್ದೆಶಕರು, ಸಿಡಾಕ್‍ನ ಜಂಟಿನಿರ್ದೆಶಕರು, ನಗರಾಭಿದ್ಧಿಕೋಶದ ಯೋಜನಾ ನಿರ್ದೆಶಕರು, ಜಿಲ್ಲಾಪಂಚಾಯತ ಉಪಕಾರ್ಯದರ್ಶಿಗಳು, ಲೀಡ್ ಡಿಸ್ಟ್ರಕ್ಟ ಮ್ಯಾನೇಜರ, ಉದ್ಯೋಗ ಮತ್ತು ತರಬೇತಿ ಇಲಾಖೆಯ ಸಹಾಯಕ ನಿರ್ದೇಶಕರು, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೆಶಕರು ಭಾಗವಹಿಸಿದ್ದರು.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *