ಯಲ್ಲಾಪುರ: ತಾಲ್ಲೂಕು ಕೇಂದ್ರದಿಂದ 12 ಕಿ.ಮೀ ದೂರದಲ್ಲಿರುವ ಮದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ರೈತರು ಕಾಡಾನೆ ದಾಳಿಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇಲ್ಲಿನ ಹೆಗ್ಗಾಪುರ, ಕರಡೊಳ್ಳಿ, ಹುಲಗೋಡ, ಹುಣಶೆಟ್ಟಿಕೊಪ್ಪ, ಕಳಸೂರು ಭಾಗದಲ್ಲಿ ಆನೆಗಳ ಹಾವಳಿ ನಿರಂತರವಾಗಿದೆ. ಕೃಷ್ಣ ದೇಸಾಯಿ 5 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಗೋವಿನ ಜೋಳ ಆನೆದಾಳಿಗೆ ಸಂಪೂರ್ಣ ಹಾನಿಯಾಗಿದೆ. ಜೋಳ, ಕಬ್ಬು, ಭತ್ತ ಹೆಚ್ಚಾಗಿ ಬೆಳೆಯಲಾಗುತ್ತಿದ್ದು ಆನೆ ದಾಳಿಯಾಗದಂತೆ ಶಾಶ್ವತ ಪರಿಹಾರ ಕ್ರಮ ಆಗಬೇಕಿದೆ. ಬೆಳೆಹಾನಿಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು. ಈ ಪ್ರದೇಶದಲ್ಲಿ 9 10 ಆನೆಗಳ ಹಿಂಡು ಸಂಚರಿಸುತ್ತಿದ್ದು ಅವುಗಳನ್ನು ಸ್ಥಳಾಂತರಿಸಬೇಕು ಎಂದು ಗ್ರಾಮದೇವಿ ಸಹಕಾರ ಸಂಘದ ಅಧ್ಯಕ್ಷ ಮಹೇಶ ಕೃಷ್ಣ ದೇಸಾಯಿ ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

