Breaking News

ಸಿಎಂ ಬದಲಾವಣೆ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಬಸವರಾಜ ಬೊಮ್ಮಾಯಿ

ಗದಗ : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ರಾತ್ರೋರಾತ್ರಿ ಮುಖ್ಯಮಂತ್ರಿ ಬದಲಾವಣೆ ಸನ್ನಿಹಿತವಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದಲ್ಲಿ ರಾತ್ರೋರಾತ್ರಿ ಎರಡು ಸಿಎಂಗಳು ಬದಲಾದ ಇತಿಹಾಸವಿದೆ. ಈಗ ಕೆಲವರು ಸಿಎಂ ಕುರ್ಚಿಗೆ ಆಸೆ ತೋರಿಸುತ್ತಿರುವುದನ್ನು ನೋಡಿದ್ರೆ ಮತ್ತೊಂದು ರಾತ್ರೋರಾತ್ರಿ ಸಿಎಂ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದಿದ್ದಾರೆ.
ವೀರೇಂದ್ರ ಪಾಟೀಲ್ ಮುಖ್ಯಮಂತ್ರಿ ಆಗಿದ್ದರೂ ರಾತ್ರೋ ರಾತ್ರಿ ಎಲ್ಲ ಶಾಸಕರು ಬದಲಾದರು ಬಳಿಕ ಆರ್. ಗುಂಡೂರಾವ್ ಸಿಎಂ ಆದರು. ಅರಸು ಎರಡನೇ ಬಾರಿ ಸಿಎಂ ಆಗಿದ್ದರು, ಎಸ್. ಬಂಗಾರಪ್ಪ ಅವರಿಗೆ 183 ಶಾಸಕರ ಬಲವಿತ್ತು ಆಗಲೂ ಸಿಎಂ ಬದಲಾದರು ಹೀಗೆ ರಾಜಕಾರಣ ನಡಿಯುತ್ತಾ ಇರುತ್ತದೆ ಎಂದರು.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *