ಹುಬ್ಬಳ್ಳಿ: ಕಳೆದ ಬಾರಿ ರಾಜ್ಯದಲ್ಲಿ ಸಾಕಷ್ಟು ಹೈಡ್ರಾಮಗೆ ಕಾರಣವಾಗಿದ್ದ ಹುಬ್ಬಳ್ಳಿಯ ಇದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಯ ವಿಚಾರ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಈ ಬಾರಿಯೂ ಈದ್ದಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ಸಿಕ್ಕಿದೆ.
ಈ ಬಾರಿ ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಗಣೇಶೋತ್ಸವದ ಆಚರಣೆಗೆ ಅವಕಾಶ ನೀಡಿದೆ. ಸೆಪ್ಟೆಂಬರ್ 7 ರಂದು ಗಣೇಶ ಪ್ರತಿಷ್ಠಾಪನೆ ಮಾಡಿ ಬಳಿಕ ಸೆಪ್ಟೆಂಬರ್ 9ರಂದು ಗಣೇಶ ವಿಸರ್ಜನೆ ಮಾಡುವಂತೆ ಸೂಚಿಸಿ ಮೂರು ದಿನಗಳ ಆಚರಣೆಗೆ ಪಾಲಿಕೆ ಕಮಿಷನರ್ ಈಶ್ವರ್ ಉಳ್ಳಾಗಡ್ಡಿ ಅನುಮತಿ ನೀಡಿದ್ದಾರೆ. ಈ ಮೂಲಕ ಸತತ ಮೂರನೇ ವರ್ಷ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಸಿಕ್ಕಂತಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

