Breaking News

ಪ್ಯಾರಿಸ್ ಪ್ಯಾರಾಲಿಂಪಿಕ್ಸ್: ಬೆಳ್ಳಿ ಗೆದ್ದ ಸಚಿನ್ ಸರ್ಜೆರಾವ್ ಖಿಲಾರಿ

ಪ್ಯಾರಿಸ್: ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ಕ್ರೀಡಾಕೂಟದಲ್ಲಿ ಭಾರತದ ಶಾಟ್‌ಪುಟ್ ಪಟು ಸಚಿನ್ ಸರ್ಜೆರಾವ್ ಖಿಲಾರಿ ಬೆಳ್ಳಿ ಪದಕ ಗೆದ್ದಿದ್ದಾರೆ.
ಪುರುಷರ ಎಫ್ 46 ವಿಭಾಗದಲ್ಲಿ ವಿಶ್ವ ಚಾಂಪಿಯನ್ ಆಗಿರುವ ಸರ್ಜೆರಾವ್, 16.32 ಮೀ. ದೂರ ಶಾಟ್‌ಪುಟ್ ಎಸೆಯುವ ಮೂಲಕ ಭಾರತಕ್ಕೆ ಮಗದೊಂದು ಪದಕ ಗೆಲ್ಲಲು ನೆರವಾದರು. ಆ ಮೂಲಕ ಸಚಿನ್ ಖಿಲಾರಿ, ತಮ್ಮದೇ ಹೆಸರಲ್ಲಿದ್ದ ಏಷ್ಯನ್ ದಾಖಲೆಯನ್ನು ಉತ್ತಮಪಡಿಸಿದರು.
ಮೇ ತಿಂಗಳಲ್ಲಿ ನಡೆದಿದ್ದ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ 34 ವರ್ಷದ ಖಿಲಾರಿ 16.30 ಮೀ. ದೂರ ಶಾಟ್‌ಪುಟ್ ಎಸೆಯುವ ಮೂಲಕ ಏಷ್ಯನ್ ದಾಖಲೆ ಬರೆದಿದ್ದರು.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *