Breaking News

ಅಪರಾಜಿತಾ ಅತ್ಯಾಚಾರ ವಿರೋಧಿ ಮಸೂದೆ ಅಂಗೀಕಾರ: ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯು ಅಪರಾಜಿತಾ ಅತ್ಯಾಚಾರ ವಿರೋಧಿ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಿದ್ದು ಪ್ರತಿಪಕ್ಷಗಳು ಮಸೂದೆಗೆ ಸಂಪೂರ್ಣ ಬೆಂಬಲ ನೀಡಿದವು.ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಘಟನೆಗಳು ಇತ್ತೀಚೆಗೆ ಹೆಚ್ಚಿದ್ದು, ಮಹಿಳೆಯರ ರಕ್ಷಣೆಗೆ ಪರಿಣಾಮಕಾರಿ ಕಾನೂನು ಜಾರಿಗೊಳಿಸುವಲ್ಲಿ ವಿಫಲರಾಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಘಟನೆ ಸಂಭವಿಸಿದ ರಾಜ್ಯಗಳ ಮುಖ್ಯಮಂತ್ರಿಗಳ ರಾಜೀನಾಮೆಗೆ ಮಮತಾ ಅವರು ಒತ್ತಾಯಿಸಿದ್ದರು.
ಅತ್ಯಾಚಾರ ಮಾನವೀಯತೆಯ ವಿರುದ್ಧದ ಶಾಪ ಅಂತಹ ಅಪರಾಧಗಳನ್ನು ತಡೆಯಲು ಸಾಮಾಜಿಕ ಸುಧಾರಣೆಗಳು ಅಗತ್ಯವಿದೆ. ಅಪರಾಜಿತಾ ಮಸೂದೆಗೆ ಸಹಿ ಹಾಕುವಂತೆ ಪ್ರತಿಪಕ್ಷಗಳು ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರನ್ನು ಕೇಳಬೇಕು. ಆನಂತರ ಮಸೂದೆ ಜಾರಿಗೊಳಿಸುವುದು ನಮ್ಮ ಜವಾಬ್ದಾರಿ ಎಂದು ಮಮತಾ ಬ್ಯಾನರ್ಜಿ ವಿಧಾನಸಭೆಯಲ್ಲಿ ಹೇಳಿದರು. ಇದಕ್ಕೂ ಮುನ್ನ ಪಶ್ಚಿಮ ಬಂಗಾಳದ ಕಾನೂನು ಸಚಿವ ಮೊಲೊಯ್ ಘಟಕ್ ಅವರು ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಅತ್ಯಾಚಾರ ವಿರೋಧಿ ಮಸೂದೆಯನ್ನು ಮಂಡಿಸಿದರು.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *