ನವಲಗುಂದ: ಸಾರ್ವಜನಿಕ ಗಣಪತಿ ಪ್ರತಿಷ್ಠಾಪನೆ ಸಂದರ್ಭದಲ್ಲಿ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ನವಲಗುಂದ ಮತ್ತು ಅಣ್ಣಿಗೇರಿ ತಾಲೂಕಿನ ಶಹರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕ ಗಣೇಶ ಮಂಡಳಿಗಳಿಗೆ ನವಲಗುಂದ ಹೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ಪ್ರೀತಿ ಕೆ. ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ವಿದ್ಯುತ್ ಲೈನ್‌ನ ಕೆಳಗೆ ಹಾಗೂ ಅಕ್ಕಪಕ್ಕದಲ್ಲಿ ಗಣಪತಿ ಪೆಂಡಾಲ್ ಹಾಕಬಾರದು ಮತ್ತು ಪೆಂಡಾಲು ಹಾಕುವಾಗ ಸುರಕ್ಷತಾ ಅಂತರವನ್ನು ಕಾಯ್ದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಅನಧಿಕೃತ ವಿದ್ಯುತ್ ಸಂಪರ್ಕ ಪಡೆಯುವಂತಿಲ್ಲ. ಸಂಬಂಧಪಟ್ಟ ಹೆಸ್ಕಾಂ ವಿಭಾಗೀಯ ಹಾಗೂ ಶಾಖಾ ಕಚೇರಿಯಿಂದ ಅನುಮತಿ ಪಡೆದು ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯಬೇಕು. ಈ ವೇಳೆ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಏನಾದರೂ ಅವಘಡಗಳು ಸಂಭವಿಸಿದರೆ ಅದಕ್ಕೆ ಹೆಸ್ಕಾಂ ಜವಾಬ್ದಾರಿಯಲ್ಲ.
ಆದ್ದರಿಂದ ಎಲ್ಲಾ ಗಣೇಶ ಪ್ರತಿಷ್ಠಾಪನಾ ಮಂಡಳಿಗಳು ತಪ್ಪದೆ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಗಣೇಶ ಹಬ್ಬವನ್ನು ಆಚರಿಸಬೇಕು ಎಂದು ಕೋರಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

