ಹುಬ್ಬಳ್ಳಿ: ಪ್ರಯಾಣಿಕರೊಬ್ಬರು ತಮ್ಮ ಬ್ಯಾಗ್ ಹಾಗೂ ಲ್ಯಾಪ್‌ಟಾಪ್‌ನ್ನು ಆಟೋದಲ್ಲೇ ಬಿಟ್ಟು ಹೋಗಿದ್ದು, ಮುಂದೆ ಹೋದ ನಂತರ ಆಟೋ ಚಾಲಕ ಬ್ಯಾಗ್‌ನ್ನು ನೋಡಿದ ತಕ್ಷಣ, ಪೊಲೀಸರ ಗಮನಕ್ಕೆ ತಂದು ಬ್ಯಾಗ್‌ನ್ನು ಮರಳಿಸಿ ಪ್ರಾಮಾಣಿಕತೆ ಮೆರೆದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಪ್ರಭು ವರ್ಜನ್ ಎಂಬ ಆಟೋ ಚಾಲಕ ಬ್ಯಾಗ್‌ನ್ನು ಮರಳಿಸಿದವರು.ಅವರು ರೈಲ್ವೆ ಸ್ಟೇಷನ್ ಕಡೆಗೆ ಪ್ರಯಾಣಿಕನನ್ನು ಕರೆದುಕೊಂಡು ಬಂದಿದ್ದಾರೆ. ಆದ್ರೆ, ಪ್ರಯಾಣಿಕ ತನ್ನ ಬ್ಯಾಗ್ ಮರೆತು ರಿಕ್ಷಾದಲ್ಲೇ ಬಿಟ್ಟು ಹೋಗಿದ್ದಾರೆ.
ಕೂಡಲೇ ಗಮನಿಸಿದ ಆಟೋ ಚಾಲಕ ಉತ್ತರ ಕರ್ನಾಟಕ ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಅವರ ಗಮನಕ್ಕೆ ತಂದು, ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಗೆ ಹೋಗಿ ಪೊಲೀಸ್ ಅಧಿಕಾರಿಗಳಿಗೆ ವಿಷಯ ತಿಳಿಸಿ, ಕಳೆದುಕೊಂಡ ಪ್ರಯಾಣಿಕನಿಗೆ ಲ್ಯಾಪ್‌ಟಾಪ್ ಬ್ಯಾಗ್ ನೀಡಿದ್ದಾರೆ. ಇವರ ಪ್ರಾಮಾಣಿಕತೆಗೆ ಪೊಲೀಸರು ಅಭಿನಂದನೆ ಸಲ್ಲಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

