Breaking News

ಮತಾಂತರಗೊಂಡವರಿಗೆ ಮೀಸಲಾತಿ ನೀಡಬೇಡಿ: ದಲಿತಪರ ಸಂಘಟನೆಗಳ ಒತ್ತಾಯ

ಬೆಂಗಳೂರು: ದಲಿತ ಸಮುದಾಯದಿಂದ ಮುಸ್ಲಿಂ, ಕೆಸ್ತ ಧರ್ಮಕ್ಕೆ ಮತಾಂತರಗೊಂಡವರಿಗೆ ಯಾವುದೇ ಕಾರಣಕ್ಕೂ ಮೀಸಲಾತಿ ಕಲ್ಪಿಸಬಾರದು. ಅವರನ್ನು ದಲಿತರು ಎಂದು ಪರಿಗಣಿಸಬಾರದು ಎಂದು ನ್ಯಾಯಮೂರ್ತಿ ಬಾಲಕೃಷ್ಣನ್​ ವಿಚಾರಣಾ ಆಯೋಗದ ಮುಂದೆ ವಿವಿಧ ದಲಿತಪರ ಸಂಘಟನೆಗಳು ಹಕ್ಕೊತ್ತಾಯ ಮಂಡಿಸಿದವು.
ಪರಿಶಿಷ್ಟ ಜಾತಿಯ ವ್ಯಕ್ತಿಗಳು ಬೇರೆ ಧರ್ಮಗಳಿಗೆ ಮತಾಂತರಗೊಂಡರೆ ಅವರಿಗೆ ಪರಿಶಿಷ್ಟ ಜಾತಿ ಸ್ಥಾನ ನೀಡಬೇಕೇ ಎಂಬುವುದನ್ನು ಪರಿಶೀಲಿಸಲು ಕೇಂದ್ರ ಸರ್ಕಾರವು, ನ್ಯಾ. ಕೆ.ಜಿ.ಬಾಲಕೃಷ್ಣನ್​ ನೇತೃತ್ವದಲ್ಲಿ ವಿಚಾರ ಆಯೋಗ ನೇಮಿಸಿದೆ. ನಿವೃತ್ತ ಐಎಎಸ್​ ಅಧಿಕಾರಿ ಡಾ.ರವೀಂದರ್​ ಕುಮಾರ್​ ಜೈನ್​, ಪ್ರಾಧ್ಯಾಪಕಿ ಸುಷ್ಮಾ ಯಾದವ್​ ಆಯೋಗದ ಸದಸ್ಯರಾಗಿದ್ದಾರೆ. ಈ ಆಯೋಗ ರಾಜ್ಯಕ್ಕೆ ಭೇಟಿ ನೀಡಿ ವಸಂತನಗರದ ಅಂಬೇಡ್ಕರ್​ ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮೀಸಲಾತಿ ಮುಂದುವರಿಕೆ ಬೇಕೆ ಅಥವಾ ಬೇಡವೇ ಎಂಬ ಕುರಿತಂತೆ ಜನಾಭಿಪ್ರಾಯ ಸಂಗ್ರಹಿಸಿತು. ವಿವಿಧ ದಲಿತ ಸಂಘಟನೆಗಳು ಆಯೋಗಕ್ಕೆ ಮನವಿ ಪತ್ರ ಸಲ್ಲಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡಿರುವವರಿಗೆ ಮೀಸಲಾತಿ ನೀಡಬಾರದು ಎಂದು ಒತ್ತಾಯಿಸಿದವು.
ಅಖಿಲ ಭಾರತ ಬಂಜಾರ ಸಮಿತಿ, ಬೋವಿ ಒಕ್ಕೂಟ, ಮಾದಿಗ ಮೀಸಲಾತಿ ಹೋರಾಟ ಸಮಿತಿ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಆದಿವಾಸಿ ಸಮುದಾಯ, ಬಡಕಟ್ಟು ಸಮುದಾಯ ಸಮಿತಿ ಹಲವು ದಲಿತ ಸಂಘಟನೆಗಳ ಮುಖಂಡರು ಭಾಗವಹಿಸಿ ಯಾವುದೇ ಕಾರಣಕ್ಕೂ ಹಿಂದೂ ಧರ್ಮದಿಂದ ಮುಸ್ಲಿಂ, ಕ್ರಿಶ್ಟಿಯನ್​ ಧರ್ಮಕ್ಕೆ ಮತಾಂತರ ಗೊಂಡವರಿಗೆ ಮೀಸಲಾತಿ ನೀಡಬಾರದು ಎಂದು ಆಯೋಗಕ್ಕೆ ಮನವಿ ಸಲ್ಲಿಸಿದವು. ಕೋಲಾರ, ಬೆಳಗಾವಿ, ಬೀದರ್​, ಚಿಕ್ಕಮಗಳೂರು, ಮೈಸೂರು, ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗಗಳಿಂದ ದಲಿತ ಸಮುದಾಯದ ಮುಖಂಡರು ಭಾಗವಹಿಸಿದ್ದರು. ಚಿತ್ರದುರ್ಗದ ಮಾದಾರ ಚನ್ನಯ್ಯ ಸ್ವಾಮೀಜಿ, ಬಂಜಾರ ಸಮುದಾಯದ ಗೋಪಾಲ್​ ಮಹಾರಾಜ್​ ಸ್ವಾಮೀಜಿ ಸೇರಿ ಮತ್ತಿತರರಿದ್ದರು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *