Breaking News

ಶಾಲಾ ವಾಹನ ಪಲ್ಟಿ: ಮೂವತ್ತು ಮಕ್ಕಳಿಗೆ ಗಾಯ

ಕೊಪ್ಪಳ: ಶಾಲಾ ಮಕ್ಕಳಿದ್ದ ಟಾಟಾ ಏಸ್ ಪಲ್ಟಿಯಾಗಿ ಮೂವತ್ತು ಮಕ್ಕಳಿಗೆ ಗಾಯವಾದ ಘಟನೆ ಕೊಪ್ಪಳ ತಾಲೂಕಿನ ಹಾಲವರ್ತಿ ಕ್ರಾಸ್ ಬಳಿ ನಡೆದಿದೆ. ಕ್ರೀಡಾಕೂಟಕ್ಕೆಂದು ಬಂದಿದ್ದ ಗುಳದಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳು, ಕೊಪ್ಪಳ ನಗರದ‌ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಮುಗಿಸಿಕೊಂಡು ಮರಳಿ ಹೋಗುತ್ತಿದ್ದ ವೇಳೆ ಟಾಟಾ ಏಸ್ ವಾಹನಕ್ಕೆ ಆರ್​ಟಿಓ ಅಧಿಕಾರಿ ನಿಲ್ಲಿಸಲು ಸೂಚನೆ ನೀಡಿದ್ದಾನೆ. ಹೀಗಾಗಿ ದಿಢೀರನೆ ನಿಲ್ಲಿಸಲು ಹೋಗಿದ್ದರಿಂದ ಟಾಟಾ ಏಸ್ ಪಲ್ಟಿಯಾಗಿದೆ ಎನ್ನಲಾಗುತ್ತಿದೆ.
ಸಂಚಾರ ಪೊಲೀಸರು ಎಷ್ಟೇ ಕಠಿಣ ಕ್ರಮಕೈಗೊಂಡರು ಅಪಘಾತಗಳ ಸಂಖ್ಯೆ ಏರುತ್ತಲೇ ಇದೆ. ಕೂಡಲೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಇನ್ನು ದುರ್ಘಟನೆ ನಡೆಯುತ್ತಿದ್ದಂತೆ ಆರ್​ಟಿಓ ಅಧಿಕಾರಿಯನ್ನು ತರಾಟೆಗೆ ತೆಗದುಕೊಂಡ ಸ್ಥಳೀಯರು, ಅಧಿಕಾರಿಯನ್ನು ಹಿಡಿದು ತಳ್ಳಾಡಿದ್ದಾರೆ. ಆರ್​ಟಿಓ ಅಧಿಕಾರಿಯಿಂದಲೇ ಘಟನೆ ನಡೆದಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದು, ಸದ್ಯ ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *