Breaking News

ಸವದಿ ಅಚ್ಚರಿ ಹೇಳಿಕೆ: ಸತೀಶ ಜಾರಕಿಹೊಳಿ ಸಿಎಂ ಆದರೆ ಸ್ವಾಗತಿಸುವೆ

ಬೆಳಗಾವಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವೇಶನಗಳನ್ನು ಅಕ್ರಮವಾಗಿ ಪಡೆದಿದ್ದಾರೆ ಎಂಬ ಆರೋಪವಿದ್ದು ಆದರೆ ಇದರಲ್ಲಿ ಸಿಎಂ ಅವರ ಯಾವುದೇ ಪಾತ್ರವಿಲ್ಲ ಮತ್ತು ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಒಂದು ವೇಳೆ ಬೆಳಗಾವಿಯಿಂದ ಯಾರೇ ಸಿಎಂ ಆದರೂ ಸ್ವಾಗತ ಮಾಡುತ್ತೇನೆ ಎಂದು ಹೇಳಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ಈಗ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನಕ್ಕೆ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೆಸರು ಕೇಳಿಬರುತ್ತಿದೆ. ನಮ್ಮ ಜಿಲ್ಲೆಯಿಂದ ಯಾರೇ ಸಿಎಂ ಆದರೂ ನಾನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ ಅನುದಾನ ನೀಡುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ. ಆದರೆ ಕಳೆದ ಎರಡು ವರ್ಷದಲ್ಲಿ ಕೋಟ್ಯಾಂತರ ರೂ. ಅನುದಾನ ನನಗೆ ದೊರೆತಿದೆ ಸರಕಾರದಿಂದ ನನಗೆ ಯಾವುದೇ ರೀತಿಯ ಅನುದಾನ ಕೊರತೆ ಆಗಿಲ್ಲ ಎಂದು ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಈ ಹಿಂದೆ ರಾಜ್ಯದ ಉಪಮುಖ್ಯಮಂತ್ರಿ ಹುದ್ದೆ ಸೇರಿದಂತೆ ಅನೇಕ ಜವಾಬ್ದಾರಿ ನಿಭಾಯಿಸಿದ ನನಗೆ ಯಾವುದೇ ಹುದ್ದೆಯ ಆಸೆ ಇಲ್ಲ ಮುಂದಿನ ದಿನಗಳಲ್ಲಿ ರಾಜಕೀಯ ಕ್ಷೇತ್ರದಲ್ಲಿ ನನಗೆ ಒಳ್ಳೆಯದಾಗುತ್ತದೆ ಆ ವಿಶ್ವಾಸ ನನಗಿದೆ ಎಂದು ಹೇಳಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *