Breaking News

ಮೋದಿ ಬ್ರೂನೈಗೆ ಭೇಟಿ: ಅಭಿವೃದ್ಧಿ ನೀತಿ ಕುರಿತು ದ್ವಿಪಕ್ಷೀಯ ಮಾತುಕತೆ

ಬಂದಾರ್‌ ಸೆರಿ ಬೆಗವಾನ್‌: ಭಾರತವು ಅಭಿವೃದ್ಧಿಯ ನೀತಿಯನ್ನು ಬೆಂಬಲಿಸುತ್ತದೆಯೇ ಹೊರತು ವಿಸ್ತರಣಾ ನೀತಿಯನ್ನಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ದ್ವಿಪಕ್ಷೀಯ ಮಾತುಕತೆಗಾಗಿ ಬ್ರೂನೈಗೆ ಭೇಟಿ ನೀಡಿದ್ದ ಅವರು, ಚೀನಾ ಗುರಿಯಾಗಿರಿಸಿಕೊಂಡು ಈ ಹೇಳಿಕೆ ನೀಡಿದರು.
ಅಲ್ಲದೆ, ಇಂಡೊ ಪೆಸಿಫಿಕ್‌ ಸಾಗರದಲ್ಲಿ ಮುಕ್ತ ಸಂಚಾರದ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು ಸುಲ್ತಾನ್ ಬೊಲ್ಕಿಯಾ ಅವರು ಆಯೋಜಿಸಿದ್ದ ಔತಣ ಕೂಟದಲ್ಲಿ ಪಾಲ್ಗೊಂಡ ಮೋದಿ, ನಾವು ಅಭಿವೃದ್ಧಿಯ ನೀತಿಯನ್ನು ಬೆಂಬಲಿಸುತ್ತೇವೆಯೇ ಹೊರತು ವಿಸ್ತರಣಾ ನೀತಿಯನ್ನು ಬೆಂಬಲಿಸುವುದಿಲ್ಲ ಎಂದು ಯಾವುದೇ ದೇಶದ ಹೆಸರನ್ನು ನೇರವಾಗಿ ಉಲ್ಲೇಖಿಸದೆ ಹೇಳಿದರು. ಈ ಪ್ರದೇಶದಲ್ಲಿ ಮುಕ್ತ ಸಂಚಾರಕ್ಕೆ ಸಂಬಂಧಿಸಿ ಮಾದರಿ ನೀತಿ ಸಂಹಿತೆಯನ್ನು ಅಂತಿಮಗೊಳಿಸಬೇಕೆಂಬುದನ್ನು ನಾವು ಒಪ್ಪುತ್ತೇವೆ ಎಂದು ಹೇಳಿದ ಮೋದಿ, ಭಾರತವು ಯಾವಾಗಲೂ ಆಸಿಯಾನ್ ಕೇಂದ್ರೀಕರಣಕ್ಕೆ ಆದ್ಯತೆ ನೀಡಿದೆ ಮತ್ತು ಆ ನಿಲುವನ್ನು ಮುಂದುವರಿಸುತ್ತದೆ ಎಂದು ತಿಳಿಸಿದರು. ಅಂತರರಾಷ್ಟ್ರೀಯ ಕಾನೂನುಗಳ ಅಡಿಯಲ್ಲಿ ನೌಕಾಯಾನ ಮತ್ತು ವಾಯುಯಾನ ಮುಕ್ತತೆಯನ್ನು ಬೆಂಬಲಿಸುತ್ತೇವೆ ಎಂದರು.
ಉಭಯ ನಾಯಕರ ಮಾತುಕತೆಯ ನಂತರ ಬಿಡುಗಡೆ ಮಾಡಿದ ಜಂಟಿ ಹೇಳಿಕೆಯಲ್ಲಿ ಶಾಂತಿ, ಸ್ಥಿರತೆ, ಕಡಲ ಸುರಕ್ಷತೆ ಮತ್ತು ಭದ್ರತೆಯನ್ನು ಕಾಪಾಡಿಕೊಳ್ಳಲು ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು. ಜೊತೆಗೆ ಈ ಪ್ರದೇಶದಲ್ಲಿ ಮುಕ್ತ ನೌಕಾಯಾನ ಮತ್ತು ವಾಯುಯಾನದ ಕಾನೂನುಬದ್ಧ ವಾಣಿಜ್ಯ ಚಟುವಟಿಕೆಯನ್ನು ಗೌರವಿಸುವುದು, ಅಂತರರಾಷ್ಟ್ರೀಯ ಕಾನೂನಿಗೆ ಅನುಗುಣವಾಗಿ, ವಿಶೇಷವಾಗಿ ಯುಎನ್‌ಸಿಎಲ್‌ಒಎಸ್ 1982ರ ಪ್ರಕಾರ ಶಾಂತಿಯುತ ವಿಧಾನಗಳ ಮೂಲಕ ವಿವಾದಗಳನ್ನು ಪರಿಹರಿಸಲು ಉಭಯ ನಾಯಕರು ಸಂಬಂಧಿಸಿದ ಎಲ್ಲ ರಾಷ್ಟ್ರಗಳನ್ನು ಒತ್ತಾಯಿಸಿದರು.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *