ಬೆಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.
ಇಂದು ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಅತ್ಯಾಚಾರ ಕುರಿತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು ಆದರೆ ಇದೀಗ ಪ್ರಜ್ವಲ್ ರೇವಣ್ಣ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ ಅರ್ಜಿ ವಜಾಗೊಳಿಸಿ ಜಡ್ಜ್ ಸಂತೋಷ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

