Breaking News

ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ: ಓರ್ವ ಸಾವು, ಮೂವರು ಗಂಭೀರ

ಗದಗ:- ರಾಂಗ್ ರೂಟ್ ನಲ್ಲಿ ಬಂದು ಬೈಕ್ ಗೆ ಬೈಕ್ ಡಿಕ್ಕಿ ಹೊಡೆದು ಹಿಂಬದಿ ಸವಾರ ಸಾವನ್ನಪ್ಪಿದ ಘಟನೆ ಮುಂಡರಗಿ ತಾಲೂಕಿನ ಹಳ್ಳಿಕೇರಿ ಹಾಗೂ ಹಳ್ಳಿಗುಡಿ ಗ್ರಾಮಗಳ ನಡುವೆ ಜರುಗಿದೆ.
ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ನಿವಾಸಿ ವಸಂತ ಚೆನ್ನಳ್ಳಿ (38) ಮೃತ ದುರ್ದೈವಿ. ರಾಂಗ್ ರೂಟ್ ನಲ್ಲಿ ಒನ್ ವೇ ನಲ್ಲಿ ಬಂದು ಎದುರಿಗೆ ಬರುತ್ತಿದ್ದ ಬೈಕ್ ಗೆ ಬೈಕ್ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ.
ಕೂಡಲೇ ಮುಂಡರಗಿ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *