ರಾಯಚೂರು: ಮಾನ್ವಿ ತಾಲೂಕಿನ ಕಪಗಲ್ ಕ್ರಾಸ್ ಬಳಿ ನಡೆದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಶಾಲಾ ಬಸ್ ನಡುವೆ ಡಿಕ್ಕಿ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಖಾಸಗಿ ಶಾಲಾ ಬಸ್ ಹಾಗೂ ಸರ್ಕಾರಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿತ್ತು. ಘಟನೆ ವೇಳೆ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಮೂವರು ವಿದ್ಯಾರ್ಥಿಗಳ ಕಾಲು ಕಟ್ ಆಗಿತ್ತು ಗಂಭೀರ ಗಾಯಗೊಂಡ ಮಕ್ಕಳನ್ನು ರಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಬ್ಬರು ಮೃತಪಟ್ಟಿದ್ದಾರೆ. ಇನ್ನು ಕೆಲವರ ಸ್ಥಿತಿ ಗಂಭೀರವಾಗಿದೆ. ಉಳಿದ ಮಕ್ಕಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಖಾಸಗಿ ಶಾಲೆ ಬಸ್ ಮಕ್ಕಳನ್ನು ಕರೆದುಕೊಂಡು ಮಾನ್ವಿ ಕಡೆಗೆ ಹೊರಟಿತ್ತು. ಅದೇ ರೀತಿ ಮಾನ್ವಿಯಿಂದ ರಾಯಚೂರು ಕಡೆಗೆ ಸಾರಿಗೆ ಬಸ್ ಹೊರಟಿತ್ತು ಎನ್ನಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

