Breaking News

ಅಕ್ರಮವಾಗಿ ಗಾಂಜಾ ಬೆಳೆದಿದ್ದ ಆರೋಪಿಯನ್ನು ಬಂಧಿಸಿದ ಪೋಲಿಸರು

ಶಿಡ್ಲಘಟ್ಟ: ಮೆಕ್ಕೆಜೋಳ ಬೆಳೆ ನಡುವೆ ಬೆಳೆದಿದ್ದ ಗಾಂಜಾ ಗಿಡವನ್ನು ಪತ್ತೆ ಮಾಡಿರುವ ದಿಬ್ಬೂರಹಳ್ಳಿ ಪೊಲೀಸರು ಸುಮಾರು 4 ಕೆ.ಜಿ.70 ಗ್ರಾಂ ಹಸಿ ಗಾಂಜಾ ಗಿಡವನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ.
ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದಿಂಬಾರ್ಲಹಳ್ಳಿ ದಾಸರ್ಲಹಳ್ಳಿ ಸರಹದ್ದಿನ ಮೆಕ್ಕೆ ಜೋಳದ ಜಮೀನಿನಲ್ಲಿ ಗಾಂಜಾ ಗಿಡಗಳು ಬೆಳೆದಿದ್ದ ಶಿಡ್ಲಘಟ್ಟ ತಾಲ್ಲೂಕಿನ ಟಿ.ವೆಂಕಟಾಪುರ ಗ್ರಾಮದ ಜನಮಡಗಪ್ಪನನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಎಸ್.ಪಿ.ಕುಶಾಲ್ ಚೌಕ್ಸಿ ಸಾರಥ್ಯದಲ್ಲಿ ಡಿವೈಎಸ್ಪಿ ಮುರಳೀಧರ್, ಸರ್ಕಲ್ ಇನ್‌್ಸಪೆಕ್ಟರ್ ಶ್ರೀನಿವಾಸ್ ಮಾರ್ಗದರ್ಶನದಲ್ಲಿ ದಿಬ್ಬೂರಹಳ್ಳಿ ಇನ್ಸ್ ಪೆಕ್ಟರ್ ಶ್ಯಾಮಲಾ, ನೇತೃತ್ವದಲ್ಲಿ ದಾಳಿ ಮಾಡಿ ತಪಾಸಣೆ ನಡೆಸಿದ ವೇಳೆ ಆರೋಪಿ ಜನಮಡುಗಪ್ಪ ಜಮೀನಿನಲ್ಲಿ ಗಾಂಜಾ ಗಿಡ ಬೆಳೆದಿರುವುದು ಪತ್ತೆಯಾಗಿದ್ದು, ವಶಕ್ಕೆ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಕೃಷ್ಣಪ್ಪ, ಚಂದ್ರಶೇಖರ್, ಪ್ರತಾಪ್, ಶ್ರೀನಿವಾಸ್ ಮೂರ್ತಿ, ವಸಂತ್ ಕುಮಾರ್ ಮತ್ತಿತರರಿದ್ದರು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *