Breaking News

ಹೆಣ್ಣು ಭ್ರೂಣ ಹತ್ಯೆ ಪ್ರಕರಣ:12 ಆರೋಪಿಗಳು ಬಂಧನ

ಮಂಡ್ಯ: ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅಭಿಷೇಕ್​ ಎಂಬಾತನನ್ನು ಬಂಧಿಸಲಾಗಿದೆ. ಸಾವಿರಾರು ಕರುಳಬಳ್ಳಿ ಕೊಂದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸಿಐಡಿಗೂ ಚಳ್ಳೆಹಣ್ಣು ತಿನ್ನಿಸಿ ದಂಧೆ ವಿಸ್ತರಿಸಿದ್ದ ಅಭಿಷೇಕ್​ ಪ್ರಮುಖ ಆರೋಪಿಯಾಗಿದ್ದಾನೆ.
ಅಭಿಷೇಕ್ ಜೊತೆ ವಿರೇಶ್ ಸೇರಿದಂತೆ 12 ಆರೋಪಿಗಳನ್ನು ಬಂಧಿಸಲಾಗಿದ್ದು ಈಗಾಗಲೇ ಭ್ರೂಣ ಹತ್ಯೆ ಕೇಸ್ ​ನಲ್ಲಿ ವಿರೇಶ್​ ಜೈಲು ಸೇರಿ ಬೇಲ್ ಮೇಲೆ ಹೊರ ಬಂದಿದ್ದ. ಬಂಧಿತರಿಂದ 2 ಸ್ಕ್ಯಾನಿಂಗ್ ಮಷಿನ್, 3 ಕಾರು, ಮೊಬೈಲ್ ಸೇರಿ 23 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *