Breaking News

ಅನ್ನಭಾಗ್ಯ ಯೋಜನೆ: ಹಣದ ಬದಲು ಆಹಾರ ಕಿಟ್‌ ವಿತರಿಸಲು ಚಿಂತನೆ

ಬೆಂಗಳೂರು: ಪಡಿತರದಾರರಿಗೆ ಹೆಚ್ಚುವರಿ 5kg ಅಕ್ಕಿಗೆ ಪರ್ಯಾಯವಾಗಿ ನೇರ ನಗದು ವರ್ಗಾವಣೆ ವ್ಯವಸ್ಥೆ ಬದಲು ಆಹಾರ ಕಿಟ್‌ ನೀಡುವುದಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿದ್ದು ಈ ಬಗ್ಗೆ ಇಂದು ನಡೆಯುವ ಸಂಪುಟ ಸಭೆಯಲ್ಲಿ ಅಧಿಕೃತ ನಿರ್ಧಾರವಾಗುವ ಸಾಧ್ಯತೆಯಿದೆ.
ಅನ್ನಭಾಗ್ಯ ಯೋಜನೆಯಡಿ 10 kg ಅಕ್ಕಿ ನೀಡುವುದಾಗಿ ಕಾಂಗ್ರೆಸ್‌ ಭರವಸೆ ನೀಡಿತ್ತು. ಆದರೆ ಮೊದಲಿಗೆ ಕೇಂದ್ರ ಸರ್ಕಾರ ಅಕ್ಕಿ ಪೂರೈಕೆಗೆ ಒಪ್ಪಿಗೆ ನೀಡದ ಕಾರಣ ಕಾರ್ಡ್‌ದಾರರಿಗೆ ಹೆಚ್ಚುವರಿ ಅಕ್ಕಿ ಬೆಲೆಯಷ್ಟು ಹಣ ನೀಡಲಾಗುತ್ತಿತ್ತು. ಈಗ ರಾಗಿ, ಗೋಧಿ, ಎಣ್ಣೆ ಸೇರಿ 5 kg ಆಹಾರ ಧಾನ್ಯ ನೀಡಲು ನಿರ್ಧರಿಸಲಾಗಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *