ಬೆಳಗಾವಿ: ಶಿಕ್ಷಣ ಅಭಿವೃದ್ಧಿಯ ಸಂಕೇತವಾಗಿದ್ದು ಯಾವ ರಾಜ್ಯದವರು ಶಿಕ್ಷಣ ಮತ್ತು ಶಿಕ್ಷಕರಿಗೆ ಆದ್ಯತೆ ಕೊಟ್ಟಿದ್ದಾರೆಯೋ, ಅವರು ಅಭಿವೃದ್ಧಿಯತ್ತ ಸಾಗಿದ್ದಾರೆ ಎಂದು ಶಾಸಕ ಆಸೀಫ್ ಸೇಠ್ ಹೇಳಿದರು.
ಇಲ್ಲಿನ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬೆಳಗಾವಿ ಶೈಕ್ಷಣಿಕ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ, ಪ್ರತಿಭಾಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣವು ನಮ್ಮನ್ನು ಅಭಿವೃದ್ಧಿಪಥದಲ್ಲಿ ಕೊಂಡೊಯ್ಯುತ್ತದೆ ಸಮಾಜದಲ್ಲಿ ಜಾಗೃತಿ ಮೂಡಿಸುತ್ತದೆ ಶಿಕ್ಷಣಕ್ಕೆ ಆದ್ಯತೆ ಕೊಡದಿದ್ದರೆ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.ಯುವಜನರು ಇಂದು ವೈದ್ಯ, ಎಂಜಿನಿಯರ್, ಐಎಎಸ್ ಅಧಿಕಾರಿ ಹೀಗೆ… ವಿವಿಧ ಹುದ್ದೆ ಅಲಂಕರಿಸುತ್ತಿದ್ದಾರೆ. ಇವರನ್ನೆಲ್ಲ ರೂಪಿಸಿದ ಹಿರಿಮೆ ಶಿಕ್ಷಕ ವರ್ಗಕ್ಕೆ ಸಲ್ಲುತ್ತದೆ. ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಬಳಗದ ಕೊಡುಗೆ ದೊಡ್ಡದಿದೆ. ಹಲವು ಕಷ್ಟ, ಸವಾಲುಗಳನ್ನು ಎದುರಿಸಿ ಶಿಕ್ಷಕರು ಸಮರ್ಥವಾಗಿ ತಮ್ಮ ಹೊಣೆಗಾರಿಕೆ ನಿಭಾಯಿಸುತ್ತಿದ್ದಾರೆ ಎಂದರು ಬೆಳಗಾವಿಯ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಪ್ರತಿ ಶಾಲೆ ವಿದ್ಯಾರ್ಥಿಗಳಿಗೆ ಡೆಸ್ಕ್ ವ್ಯವಸ್ಥೆ ಮಾಡಲಾಗುವುದು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

