ಅಗರ್ತಲಾ: ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಅಭಿನಂದನೆ ಸಲ್ಲಿಸುವ ನಿರ್ಣಯವನ್ನು ವಿರೋಧ ಪಕ್ಷಗಳ ಸದಸ್ಯರ ಪ್ರತಿಭಟನೆ ಮತ್ತು ಸಭಾತ್ಯಾಗದ ನಡುವೆಯೂ ತ್ರಿಪುರ ವಿಧಾನಸಭೆಯಲ್ಲಿ ಮಂಡಿಸಲಾಯಿತು.
ಲೋಕಸಭೆಯ 543 ಸ್ಥಾನಗಳ ಪೈಕಿ 293ರಲ್ಲಿ ಗೆಲುವು ಸಾಧಿಸುವ ಮೂಲಕ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ಸತತ ಮೂರನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೇರಿದೆ. ಎನ್‌ಡಿಎ ಸರ್ಕಾರದ ಈ ಐತಿಹಾಸಿಕ ಗೆಲುವನ್ನು ಪ್ರಶಂಸಿಸುವ ನಿರ್ಣಯವನ್ನು ಸಭಾಪತಿ ವಿಶ್ವಬಂಧು ಸೇನ್ ಅವರು ಪ್ರಶ್ನೋತ್ತರ ಅವಧಿಯ ಬಳಿಕ ಮಂಡಿಸಿದರು.
ಇತ್ತೀಚೆಗೆ ಮುಕ್ತಾಯವಾದ ಲೋಕಸಭೆ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಎಲ್ಲ ಸದಸ್ಯರಿಗೆ ತ್ರಿಪುರಾ ವಿಧಾನಸಭೆಯು ಇಂದು ಶುಭಾಶಯ ಕೋರುತ್ತದೆ. ಸತತ ಮೂರನೇ ಬಾರಿ ವಿಜಯ ದಾಖಲಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಸದನ ಅಭಿನಂದನೆ ತಿಳಿಸುತ್ತದೆ. ಈ ಗೆಲುವು ಭಾರತದ ಅಭಿವೃದ್ಧಿ, ಪ್ರಗತಿ ಮತ್ತು ಮೂಲಸೌಕರ್ಯವನ್ನು ಪೋಷಿಸಲಿದೆ ಎಂಬ ನಿರೀಕ್ಷೆ ಇದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





