Breaking News

ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಸೇನಾವಾಹನ: ನಾಲ್ವರು ಸೇನಾ ಸಿಬ್ಬಂದಿ ಸಾವು

ಗ್ಯಾಂಗ್ಟಾಕ್: ಸಿಕ್ಕಿಂನ ಪಾಕ್ಯೊಂಗ್ ಜಿಲ್ಲೆಯಲ್ಲಿ ಸೇನಾ ವಾಹನವು ಅಪಘಾತಕ್ಕೀಡಾದ ಪರಿಣಾಮ ನಾಲ್ವರು ಸೇನಾ ಸಿಬ್ಬಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಸೇನಾ ಸಿಬ್ಬಂದಿ ಕರೆದೊಯ್ಯುತ್ತಿದ್ದ ವಾಹನವು ರೆನಾಕ್ ರೋಂಗ್ಲಿ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೃತರನ್ನು ಮಧ್ಯಪ್ರದೇಶದ ಸಿಪಾಯಿ ಪ್ರದೀಪ್ ಪಟೇಲ್, ಇಂಫಾಲ್ ನಿವಾಸಿ ಪೀಟರ್, ಹರಿಯಾಣ ನಿವಾಸಿ ನಾಯಕ್ ಗುರ್ಸೇವ್ ಸಿಂಗ್ ಮತ್ತು ತಮಿಳುನಾಡಿನ ಸುಬೇದಾರ್ ಕೆ ತಂಗಪಾಂಡಿ ಎಂದು ಗುರುತಿಸಲಾಗಿದೆ. ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮೃತದೇಹಗಳನ್ನು ಸೇನೆಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *