ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಪ್ರಕರಣಗಳು ಕಂಡು ಬಂದರೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಕನ್ನಡ ಚಿತ್ರರಂಗದಲ್ಲೂ ಕಾಸ್ಟಿಂಗ್ ಕೌಚ್ ಸದ್ದು ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಆ ರೀತಿ ಏನಾದರೂ ಆಗಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು ಮಹಿಳೆಯರ ರಕ್ಷಣೆಯೇ ನಮಗೆ ಮುಖ್ಯ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಆ ವಿಚಾರದ ಬಗ್ಗೆ ಭರವಸೆ ನೀಡಿದ್ದಾರೆ ಮಹಿಳೆಯರ ರಕ್ಷಣೆಗೆ ಸರ್ಕಾರ ಸದಾ ಬದ್ಧವಾಗಿದೆ. ಕಾಸ್ಟಿಂಗ್ ಕೌಚ್ ನಂತ ಪ್ರಕರಣಗಳು ಕಂಡು ಬಂದರೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

