Breaking News

ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಪತ್ತೆ

ರಾಯಚೂರು : ಹಳ್ಳ ದಾಟುತ್ತಿದ್ದ ವೇಳೆ ಮಳೆಯ ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತ ದೇಹ ಪತ್ತೆಯಾಗಿದೆ.
ಮೃತ ಯುವಕ ರಾಯಚೂರು ತಾಲೂಕಿನ ಫತ್ತೆಪುರ ಗ್ರಾಮದ ಎಚ್ ಡಿ ಎಫ್ ಸಿ ಬ್ಯಾಂಕ್ ಸಿಬ್ಬಂದಿ ಬಸವರಾಜು (33) ಎಂದು ತಿಳಿದುಬಂದಿದೆ. ಕಳೆದ ಸೆಪ್ಟೆಂಬರ್ 3ರಂದು ರಾತ್ರಿ ಹಳ್ಳ ದಾಟುತ್ತಿದ್ದಾಗ ಬಸವರಾಜು ಕೊಚ್ಚಿ ಹೋಗಿದ್ದ. ರಾಯಚೂರು ತಾಲೂಕಿನ ಫತ್ತೆಪುರ ಗ್ರಾಮದಿಂದ ಒಂದುವರೆ ಕಿಲೋಮೀಟರ್ ದೂರದಲ್ಲಿ ಇದೀಗ ಬಸವರಾಜುವಿನ ಮೃತ ದೇಹ ಪತ್ತೆಯಾಗಿದೆ. ಎನ್ ಡಿ ಆರ್ ಎಫ್, ಅಗ್ನಿಶಾಮಕದಳ ಪೊಲೀಸರ ಹುಡುಕಾಟ ವೇಳೆ ಪತ್ತೆಯಾಗಿದ್ದು ಈ ಕುರಿತು ರಾಯಚೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *