ಧಾರವಾಡ: ವಿಘ್ನನಿವಾರಕನಾದ ಗಣೇಶ ಎಲ್ಲರ ಮನೆ, ಮನಗಳಲ್ಲಿ ಪ್ರತಿಷ್ಠಾಪನೆಗೊಳ್ಳಲಿದ್ದಾನೆ. ಈಗಾಗಲೇ ಗಣೇಶನ ಮೂರ್ತಿಗಳನ್ನು ಸಿದ್ಧಪಡಿಸಲಾಗಿದ್ದು, ಗಣೇಶನ ಮೂರ್ತಿ ತಯಾರಕರು ತಾವು ಸಿದ್ಧಪಡಿಸಿದ ಗಣೇಶನ ಮೂರ್ತಿಗಳಿಗೆ ಅಂತಿಮ ಹಂತದ ಬಣ್ಣ ಬಳಿಯುವ ಕೆಲಸದಲ್ಲಿ ತೊಡಗಿದ್ದಾರೆ.
ಪ್ರಸಕ್ತ ವರ್ಷ ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಧಾರವಾಡ ಜಿಲ್ಲಾಡಳಿತ ಒತ್ತು ನೀಡಿದೆ. ಪಿಓಪಿ ಗಣೇಶನ ಮೂರ್ತಿಗಳನ್ನು ಮಾರಾಟ ಮಾಡದಂತೆ ನಿಷೇಧ ಹೇರಲಾಗಿದ್ದು, ಅಂತಹ ಮೂರ್ತಿ ಮಾರಾಟಗಾರರ ಮೇಲೆ ಕ್ರಮ ಸಹ ಕೈಗೊಳ್ಳಲಾಗುತ್ತಿದೆ. ಅನೇಕ ವರ್ಷಗಳಿಂದ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳನ್ನೇ ಮಾಡಿಕೊಂಡು ಬರುತ್ತಿರುವ ಕಲಾವಿದ ಧಾರವಾಡದ ಮಂಜುನಾಥ ಹಿರೇಮಠ ಅವರು ತಾವು ಸಿದ್ಧಪಡಿಸಿದ ಮೂರ್ತಿಗಳಿಗೆ ಅಂತಿಮ ಹಂತದ ಸ್ಪರ್ಶ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

