ಸಿಂಗಾಪುರ: ಉಭಯ ದೇಶಗಳ ನಡುವೆ ಸಾಂಸ್ಕೃತಿಕ ಬಾಂಧವ್ಯವನ್ನು ವೃದ್ಧಿಸಲು ಸಿಂಗಾಪುರದಲ್ಲಿ ವಿಶ್ವದ ಮೊದಲ ತಿರುವಳ್ಳುವರ್ ಕೇಂದ್ರವನ್ನು ಮತ್ತು ಇನ್ವೆಸ್ಟ್ ಇಂಡಿಯಾ ಕಚೇರಿಯನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಎರಡು ದಿನಗಳ ಭೇಟಿಗಾಗಿ ಸಿಂಗಾಪುರಕ್ಕೆ ತೆರಳಿರುವ ಮೋದಿ, ಪ್ರಧಾನಿ ಲಾರೆನ್ಸ್ ವಾಂಗ್ ಅವರೊಂದಿಗೆ ಸಭೆ ನಡೆಸಿದರು. ಪ್ರಧಾನಿ ವಾಂಗ್ ಅವರು ಮೋದಿ ಅವರ ಗೌರವಾರ್ಥ ಖಾಸಗಿ ಔತಣಕೂಟವನ್ನು ಏರ್ಪಡಿಸಿದ್ದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಜೈದೀಪ್ ಮಜುಂದಾರ್ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.
ಮೋದಿಯವರಿಗೆ ಸಂಸತ್ ಭವನದಲ್ಲಿ ವಿಧ್ಯುಕ್ತ ಸ್ವಾಗತ ನೀಡಲಾಯಿತು ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ ಮತ್ತು ಭದ್ರತೆ, ಫಿನ್‌ಟೆಕ್ ಮತ್ತು ಡಿಜಿಟಲ್ ಆರ್ಥಿಕತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹಕಾರ ಕುರಿತು ಚರ್ಚಿಸಿದರು. ಸೆಮಿಕಂಡಕ್ಟರ್, ಡಿಜಿಟಲ್ ತಂತ್ರಜ್ಞಾನ, ಕೌಶಲ ಅಭಿವೃದ್ಧಿ, ಶಿಕ್ಷಣ ಮತ್ತು ಆರೋಗ್ಯ ರಕ್ಷಣೆ ಕ್ಷೇತ್ರದಲ್ಲಿ ನಾಲ್ಕು ತಿಳಿವಳಿಕೆ ಒಪ್ಪಂದಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು ಎಂದು ಹೇಳಿದರು. ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸಲು ಸಿಂಗಾಪುರದಲ್ಲಿ ಇನ್ವೆಸ್ಟ್ ಇಂಡಿಯಾ ಕಚೇರಿ ಸ್ಥಾಪಿಸಲಾಗುತ್ತದೆ. ಇದು ಸಿಂಗಾಪುರದಲ್ಲಿ ಹೂಡಿಕೆದಾರರಿಗೆ ನೆರವಾಗಲಿದೆ ವಿಶ್ವದ ಮೊದಲ ತಿರುವಳ್ಳುವರ್ ಸಾಂಸ್ಕೃತಿಕ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನಿ ಮೋದಿ ಘೋಷಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

