Breaking News

ಮೈಸೂರು ದಸರಾ: ದೀಪಾಲಂಕಾರದಿಂದ ಉತ್ಸವದ ಅಂದ ಹೆಚ್ಚಿಸಿ

ಮೈಸೂರು: ನಾಡಹಬ್ಬ ದಸರಾ ನಮ್ಮ ಮನೆಯ ಹಬ್ಬವೆಂಬ ಮನಸ್ಥಿತಿಯೊಂದಿಗೆ ದೀಪಾಲಂಕಾರ ಮಾಡಿ ಉತ್ಸವದ ಅಂದ ಹೆಚ್ಚಿಸಬೇಕು ಎಂದು ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ಅಧ್ಯಕ್ಷ ರಮೇಶ್‌ ಬಂಡಿಸಿದ್ದೇಗೌಡ ಸೂಚಿಸಿದರು.
ಇಲ್ಲಿನ ವಿಜಯನಗರ 2ನೇ ಹಂತದಲ್ಲಿರುವ ನಿಗಮದ ಪ್ರಧಾನ ಕಚೇರಿಯಲ್ಲಿ ಗುರುವಾರ ನಡೆದ ರಾಜ್ಯ ಅನುಮತಿ ಪಡೆದ ವಿದ್ಯುತ್‌ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ಈ ಬಾರಿ ವಿದ್ಯುತ್ ದೀಪಾಲಂಕಾರ 21 ದಿನಗಳವರೆಗೆ ಇರಲಿದೆ. ಹೀಗಾಗಿ ಹೆಚ್ಚು ಮುತುವರ್ಜಿಯಿಂದ ನಿರ್ವಹಿಸಬೇಕು ಯಾವುದೇ ಭಿನ್ನಾಭಿಪ್ರಾಯಗಳಿಲ್ಲದೆ, ಒಂದಾಗಿ ಉತ್ಸವ ಆಚರಿಸೋಣ ಗುತ್ತಿಗೆದಾರರ ಯಾವುದೇ ಸಮಸ್ಯೆಗಳಿದ್ದರೂ ಎಲ್ಲವನ್ನೂ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಆರಂಭದಿಂದ ಕೊನೆವರೆಗೂ ದೀಪಾಲಂಕಾರದ ಅಂದ ಉಳಿಯುವಂತೆ ನೋಡಿಕೊಳ್ಳಬೇಕು. ಬಹುತೇಕರು, ಜಂಬೂಸವಾರಿ ಮೆರವಣಿಗೆ ಮುಗಿದ ನಂತರದಲ್ಲಿ ದೀಪಾಲಂಕಾರ ವೀಕ್ಷಣೆಗಾಗಿ ಬರುತ್ತಾರೆ. ಹೀಗಾಗಿ ಕಡೆಯ 8 ರಿಂದ 10 ದಿನಗಳು ದೀಪಾಲಂಕಾರ ನಿರ್ವಹಣೆ ಮಾಡುವುದು ಸವಾಲಾಗಲಿದೆ. ಅದಕ್ಕೆ ತಕ್ಕಂತೆ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *